ಮೊನ್ನೆ ಸತ್ತಿದ್ದ ಪೂನಂ ಪಾಂಡೆ ನಿನ್ನೆ ಜೀವಂತ – ನಟಿ ವಿರುದ್ಧ ಕೇಸ್‌ ದಾಖಲಿಸಲು ಸೂಚನೆ

Public TV
2 Min Read

ಮುಂಬೈ: ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್‌ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್‌ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.

ತಮ್ಮ ಪ್ರಚಾರಕ್ಕಾಗಿ ಇಂತಹ ಸ್ಟಂಟ್‌ಗಳನ್ನ ಮಾಡುವಂತವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸಾವಿನ ಸುದ್ದಿಯಿಂದ ಗರ್ಭಕಂಠ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿಲ್ಲ. ಇದು ಕ್ಯಾನ್ಸರ್‌ ಸಮಸ್ಯೆಯಿಂದ ಬುದುಕುಳಿದಿರುವವರನ್ನು ಗೇಲಿ ಮಾಡಿದಂತಾಗಿದೆ. ಇದರಿಂದ ಪೂನಂ ವಿರುದ್ಧ ಕೇಸ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ನಾನು ಬದುಕಿದ್ದೇನೆ : ವಿಡಿಯೋ ಮಾಡಿ ಶಾಕ್ ಕೊಟ್ಟ ಪೂನಂ

ಏನಿದು ಗಿಮಿಕ್‌ ರಾಣಿಯ ಕಾಂಟ್ರವರ್ಸಿ?
ಗರ್ಭಕಂಠದ ಕ್ಯಾನ್ಸರ್‌ನಿಂದಾಗಿ ಪೂನಂ ಪಾಂಡೆ ನಿಧನರಾಗಿದ್ದಾರೆ ಎಂದು ನಟಿಯ ಮ್ಯಾನೇಜರ್ ಪೂನಂ ಅವರ ಅಧಿಕೃತ ಇನ್‌ಸ್ಟಾ ಪೇಜ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಸುದ್ದಿ ಓದಿ ಅನೇಕರು ಶಾಕ್ ಆಗಿದ್ದರು. ಅದರಲ್ಲೂ ಈ ಕ್ಯಾನ್ಸರ್‌ನಿಂದ ಬಳಲುತ್ತಿರುವವರು ಆತಂಕಕ್ಕೀಡಾಗಿದ್ದರು.

ಶನಿವಾರ ಬೆಳಗ್ಗೆ ಅದೇ ಇನ್ಸ್ಟಾ ಪೇಜ್‌ನಲ್ಲಿ ವಿಡಿಯೋ ಅಪ್‌ಲೋಡ್ ಮಾಡಿದ್ದ ಪೂನಂ, ಇದೊಂದು ಜಾಗೃತಿಗಾಗಿ ಮಾಡಿರುವ ಗಿಮಿಕ್ ಎಂದು ಒಪ್ಪಿಕೊಂಡಿದ್ದಾರೆ. ಗಿಮಿಕ್ ಮಾಡಿ ಕ್ಷಮೆಯನ್ನೂ ಕೇಳಿದ್ದಾರೆ. ಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪೂನಂ ವಿರುದ್ಧ ಕಾನೂನು ಕ್ರಮಕ್ಕೆ ಅನೇಕರು ಆಗ್ರಹ ಮಾಡಿದ್ದಾರೆ. ಇದನ್ನೂ ಓದಿ: ಪೂನಂ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ: ಭುಗಿಲೆದ್ದ ಜನಾಕ್ರೋಶ

ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿ ಜನರ ಭಾವನೆ ಜೊತೆ ಚೆಲ್ಲಾಟ ಆಡಬಾರದು. ಇದು ಗಂಭೀರ ವಿಚಾರ. ಜೊತೆಗೆ ಪೂನಂ ಪಾಂಡೆ ಸಾವಿನ ಸುಳ್ಳಿನಿಂದ ಇತರೆ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿರುವವರು ಮಹಿಳೆಯರು ಕೂಡ ಆತಂಕಕ್ಕೆ ಒಳಗಾಗಿರುತ್ತಾರೆ. ಹೀಗಾಗಿ ಈ ರೀತಿ ಸುಳ್ಳು ಸುದ್ದಿ ಹರಡಿಸಿ ಗಿಮಿಕ್ ಮಾಡಿದ ಪೂನಂ ವಿರುದ್ಧ ಕ್ರಮ ತೆಗೆದುಕೊಳ್ಳಿ ಅನೇಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಟಿಕೆಟ್ ಕೊಡಿಸೋದಾಗಿ ಹಣ ಪಡೆದು ವಂಚಿಸಿದ ಡ್ರೋನ್ ‍ಪ್ರತಾಪ್: ದೂರು ದಾಖಲು

Share This Article