ಮಹಾರಾಷ್ಟ್ರ ಪೊಲೀಸರಿಂದ ಬೆಂಗ್ಳೂರಲ್ಲಿ ಮಾದಕ ವಸ್ತು ಸೀಜ್ – ಸರ್ಕಾರದ ವಿರುದ್ಧ ಹೋರಾಟ: ನಿಖಿಲ್

2 Min Read

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumarswamy) ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ (X) ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಸರ್ಕಾರದ ವಿರುದ್ದ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಉನ್ನವೋ ರೇಪ್‌ ಕೇಸ್‌ – ಸೆಂಗಾರ್‌ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ

ಎಕ್ಸ್‌ನಲ್ಲಿ ಏನಿದೆ?
ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ (Congress Govt) ದಂಧೆಕೋರರನ್ನ ಬೆಂಬಲಿಸುತ್ತಿದೆ. ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಚ್ಚಿ, ಸುಮಾರು 390 ಕೋಟಿ ರೂ. ಮೌಲ್ಯದ 192 ಕೆ.ಜಿ. ಮೆಫೆಡ್ರೋನ್ ಡ್ರಗ್ಸ್‌ನ್ನು ಮಹಾರಾಷ್ಟ್ರ ಪೊಲೀಸರು (Maharashtra Police) ವಶಪಡಿಸಿಕೊಂಡಿದ್ದರು. ಇದೀಗ ಮತ್ತೆ ಬೆಂಗಳೂರಿನ 3 ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ 56 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ದಂಧೆಕೋರರನ್ನು ಪತ್ತೆ ಹಚ್ಚಲು ಮಹಾರಾಷ್ಟ ಪೊಲೀಸರು ಬರಬೇಕಾದರೆ, ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯ ಗೃಹ ಇಲಾಖೆ, ಸಿಎಂ ಮತ್ತು ಡಿಸಿಎಂ ಭೋಜನ ಕೂಟಕ್ಕೆ ಮಾತ್ರ ಸೀಮಿತವಾಗಿದಿಯೇ? ಸರ್ಕಾರ ಈ ಕೂಡಲೇ ಯುವ ಜನಾಂಗಕ್ಕೆ ಮಾರಕವಾಗಿರುವ ಈ ಡ್ರಗ್ಸ್ ಮಾಫಿಯವನ್ನು ಗಂಭೀರವಾಗಿ ಪರಿಗಣಿಸಿ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಹೊಸ ವರ್ಷಾಚರಣೆ ಹೊಸ್ತಿಲಲ್ಲೇ ಭರ್ಜರಿ ಬೇಟೆ; ಬೆಂಗಳೂರಲ್ಲಿ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

Share This Article