ರಾಜಮೌಳಿ ಸಿನಿಮಾಗಾಗಿ ಮಹೇಶ್ ಬಾಬು ಸಿಕ್ಸ್ ಪ್ಯಾಕ್ ತಯಾರಿ

Public TV
1 Min Read

ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ನ ಚಿತ್ರ ಇನ್ನೂ ಸೆಟ್ಟೇರಿಲ್ಲ. ಕಥೆ ಕೂಡ ಲಾಕ್ ಆಗಿಲ್ಲ. ಆದರೂ, ಈ ಚಿತ್ರದ ಬಗ್ಗೆ ನಿರಂತರವಾಗಿ ನಾನಾ ರೀತಿಯ ಸುದ್ದಿಗಳು ಬರುತ್ತಲೇ ಇವೆ. ಇದೀಗ ಮಹೇಶ್ ಬಾಬು ಈ ಸಿನಿಮಾಗಾಗಿ ಸಿಕ್ಸ್ ಪ್ಯಾಕ್ (Six Pack) ಮಾಡಿಕೊಳ್ಳುತ್ತಿದ್ದಾರಂತೆ. ಈ ಸಿನಿಮಾದಲ್ಲಿ ಅವರದ್ದು ಹೊಸ ಬಗೆಯ ಪಾತ್ರವಾಗಿದ್ದರಿಂದ ಬಹಿರಂಗವಾಗಿ ಕಾಣಿಸಿಕೊಳ್ಳದಂತೆ ನಟನಿಗೆ ರಾಜಮೌಳಿ ಷರತ್ತು ಕೂಡ ಹಾಕಿದ್ದಾರಂತೆ.

ಈ ನಡುವೆ ಚಿತ್ರದ ಟೈಟಲ್ ಬಗ್ಗೆಯೂ ಸುದ್ದಿಯೊಂದು ಹರಿದಾಡುತ್ತಿದೆ. ರಾಜಮೌಳಿ (Rajamouli) ಮತ್ತು ಮಹೇಶ್ ಬಾಬು (Mahesh Babu) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಸಿಂಪಲ್ ಆಗಿರುವಂತಹ ಶೀರ್ಷಿಕೆ (Title) ಇಡಲು ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜಮೌಳಿ ಎರಡು ಶೀರ್ಷಿಕೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅದರಲ್ಲಿ ಒಂದನ್ನು ಪಕ್ಕಾ ಮಾಡಲಿದ್ದಾರೆ. ಮಹಾರಾಜ್ ಅಥವಾ ಚಕ್ರವರ್ತಿ ಎನ್ನುವ ಹೆಸರನ್ನು ರಾಜಮೌಳಿ ಆಯ್ಕೆ ಮಾಡಿದ್ದಾರೆ.

ಒಂದು ಕಡೆ ಶೀರ್ಷಿಕೆ ಪಕ್ಕಾ ಮಾಡುವಲ್ಲಿ ರಾಜಮೌಳಿ ತೊಡಗಿದ್ದರೆ ಮತ್ತೊಂದು ಕಡೆ ಈ ಸಿನಿಮಾಗೆ ಇಂಡೋನೇಷಿಯಾದ ನಟಿ ಚೆಲ್ಸಿಯಾ ಎಲಿಜಬೆತ್ ಇಸ್ಲಾನ್ (Chelsea Elizabeth Islan) ಅವರನ್ನು ನಾಯಕಿಯಾಗಿ ಚಿತ್ರತಂಡ ಫೈನಲ್ ಮಾಡಿದೆ ಎನ್ನುವ ಸುದ್ದಿಯೂ ಇದೆ. ಸಿನಿಮಾದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಇದರ ಜೊತೆಗೆ ಚಿತ್ರಕ್ಕೆ ಬೇಕಾಗಿರೋ ಪಾತ್ರಧಾರಿಗಳ ಹುಡುಕಾಟ ಕೂಡ ನಡೆಯುತ್ತಿದೆ.

ನಟಿ ಚೆಲ್ಸಿಯಾ ಅವರನ್ನು ಕೆಲದಿನಗಳ ಹಿಂದೆ ಸ್ಕ್ರೀನ್ ಟೆಸ್ಟ್ ಕೂಡ ಮಾಡಿದ್ದರು ಎನ್ನಲಾಗುತ್ತಿದೆ. ಇಂಡೋನೇಷಿಯಾದ ಮೂಲದ ಈ ನಟಿ ‘ಟೇಂಟಂಗಾ ಮೆಸಾ ಗಿಟು’ ಹೆಸರಿನ ಟಿವಿ ಸರಣಿ ಮೂಲಕ ಜನಪ್ರಿಯತೆ ಗಳಿಸಿದವರು. ನಟ ಮಹೇಶ್ ಬಾಬುಗೆ ಚೆಲ್ಸಿಯಾ ಎಲಿಜಬೆತ್ ಇಸ್ಲಾನ್ ನಾಯಕಿ ಎಂಬ ಸುದ್ದಿ ಚಿತ್ರತಂಡದಿಂದ ಅಧಿಕೃತವಾಗಿ ಹೊರಬಿದ್ದಿಲ್ಲ. ಆದರೆ ಸುದ್ದಿ ಕೇಳಿರೋ ಪ್ರಿನ್ಸ್ ಮಾತ್ರ ಸಖತ್ ಖುಷಿಪಟ್ಟಿದ್ದಾರೆ. ವಿಷ್ಯ ಏನೇ ಇರಲಿ ಸಿನಿಮಾ ಬೇಗ ತೆರೆಯ ಮೇಲೆ ನೋಡಬೇಕು ಅಂತ ಅಭಿಮಾನಿಗಳು ಕಾಯ್ತಿದ್ದಾರೆ.

Share This Article