ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿದ ಮಹೇಶ್ ಶೆಟ್ಟಿ ತಿಮರೋಡಿ

Public TV
1 Min Read

ಮಂಗಳೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarodi) ಇಂದು ದಿಢೀರ್‌ ಕಾಣಿಸಿಕೊಂಡು ಬೆಳ್ತಂಗಡಿ ಠಾಣೆಗೆ (Belthangady Police Station) ಆಗಮಿಸಿದ್ದಾರೆ.

ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ಇಂದು ಹಾಜರಾಗಿದ್ದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ (BL Santosh) ಅವರನ್ನು ನಿಂದಿಸಿದ ಆರೋಪದ ಅಡಿ ಬ್ರಹ್ಮಾವರ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಆಗಸ್ಟ್‌ 21 ರಂದು ಉಜಿರೆಯ ತಿಮರೋಡಿಗೆ ಪೊಲೀಸರು ಆಗಮಿಸಿ ಮಹೇಶ್‌ ಶೆಟ್ಟಿಯನ್ನು ಬಂಧಿಸಿದ್ದರು. ಇದನ್ನೂ ಓದಿ: ತಿಮರೋಡಿ ತೋಟದಲ್ಲಿ ಸಿಕ್ತಾ ಚಿನ್ನಯ್ಯ ತಂದ ಬುರುಡೆ?

 

ಬಂಧನದ ವೇಳೆ ತಿಮರೋಡಿ ಸೇರಿದಂತೆ ಹಲವು ಮಂದಿ ಅಡ್ಡಿ ಪಡಿಸಿದ್ದರು. ಹೀಗಾಗಿ ಬೆಳ್ತಂಗಡಿ ಠಾಣೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಹಾಜರಾಗಲು ತಿಮರೋಡಿ ಇಂದು ಬೆಳಗ್ಗೆ ಠಾಣೆಗೆ ಬಂದಿದ್ದಾರೆ.

ಆ.26 ರಂದು ಚಿನ್ನಯ್ಯನನ್ನು ತಿಮರೋಡಿಯ ನಿವಾಸಕ್ಕೆ ಮಹಜರು ಮಾಡಲು ಕರೆದುಕೊಂಡು ಬರಲಾಗಿತ್ತು. ಮಹಜರಿಗೆ ಕರೆ ತರುವ ಕೆಲ ಗಂಟೆಯ ಮೊದಲು ತಿಮರೋಡಿ ಮನೆಯಿಂದ ಹೊರಗಡೆ ಹೋಗಿದ್ದರು.

Share This Article