ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

By
2 Min Read

– ಮದುವೆ ಬಗ್ಗೆ ಇನ್ನೂ ತುಟಿ ಬಿಚ್ಚದ ಸಂಸದೆ

ನವದೆಹಲಿ: ತೃಣಮೂಲ ಕಾಂಗ್ರೆಸ್ (Trinamool Congress) ಸಂಸದೆ ಮಹುವಾ ಮೋಯಿತ್ರಾ (Mahua Moitra) ಅವರು ಬಿಜೆಡಿ ಮಾಜಿ ಸಂಸದ ಪಿನಾಕಿ ಮಿಶ್ರಾ (Pinaki Misra) ಅವರನ್ನು ಜರ್ಮನಿಯಲ್ಲಿ ಮದುವೆಯಾಗಿದ್ದಾರೆ. ಮದುವೆಯಾಗಿರುವ ಫೋಟೋವನ್ನು ಸಂಸದೆ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

50 ವರ್ಷದ ಮೊಯಿತ್ರಾ ಮತ್ತು 65 ವರ್ಷದ ಮಿಶ್ರಾ ಇಬ್ಬರೂ ಕೇಕ್‌ ಕತ್ತರಿಸಿ ಹೊಸಬಾಳಿಗೆ ಕಾಲಿಟ್ಟಿರುವ ಸಂಭ್ರಮದ ಫೋಟೊವನ್ನು ಸ್ವತಃ ಮೊಯಿತ್ರಾ ಹಂಚಿಕೊಂಡಿದ್ದಾರೆ. ಫೋಟೊ ಜೊತೆಗೆ, ಪ್ರೀತಿ ಮತ್ತು ಶುಭ ಹಾರೈಕೆಗಳಿಗಾಗಿ ಎಲ್ಲರಿಗೂ ಧನ್ಯವಾದಗಳು. ತುಂಬಾ ಕೃತಜ್ಞತೆಗಳು ಎಂದು ಸಂಸದೆ ಬರೆದುಕೊಂಡಿದ್ದಾರೆ. ಇದನ್ನೂ ಓದಿ: Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

ಸಂಸತ್ತಿನಲ್ಲಿ ಜೋರು ಭಾಷಣಗಳ ಮೂಲಕ ಹೆಸರುವಾಸಿಯಾಗಿರುವ ಮೊಯಿತ್ರಾ, ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಮೊದಲ ಅವಧಿಯಲ್ಲಿ ಅವರ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಹಣ ಪಡೆದ ಆರೋಪ ಕೇಳಿಬಂದಿತ್ತು. ಈ ಆರೋಪದ ಮೇಲೆ ಅವರನ್ನು ಅನರ್ಹಗೊಳಿಸಲಾಗಿತ್ತು.

ಮಹುವಾ ಮೊಯಿತ್ರಾ ಯಾರು?
ಮಹುವಾ ಮೊಯಿತ್ರಾ ಅಕ್ಟೋಬರ್ 12, 1974 ರಂದು ಅಸ್ಸಾಂನಲ್ಲಿ ಜನಿಸಿದರು. ಅವರು ಅರ್ಥಶಾಸ್ತ್ರ ಮತ್ತು ಗಣಿತಶಾಸ್ತ್ರದಲ್ಲಿ ಬಿಎ ಪದವಿಯನ್ನು ಪಡೆದಿದ್ದಾರೆ. ಅಮೆರಿಕದ ಮ್ಯಾಸಚೂಸೆಟ್ಸ್‌ನ ಮೌಂಟ್ ಹೋಲಿಯೋಕ್ ಕಾಲೇಜಿನಲ್ಲಿ ಮ್ಯಾಗ್ನಾ ಕಮ್ ಲಾಡ್ ಪದವಿ ಪಡೆದಿದ್ದಾರೆ. 2010 ರಲ್ಲಿ, ಅವರು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದರು. 2019 ರಲ್ಲಿ ಪಶ್ಚಿಮ ಬಂಗಾಳದ ಕರಿಂಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದಿದ್ದರು.

ಪಿನಾಕಿ ಮಿಶ್ರಾ ಯಾರು?
ಪಿನಾಕಿ ಮಿಶ್ರಾ ಅಕ್ಟೋಬರ್ 23, 1959 ರಂದು ಒಡಿಶಾದ ಪುರಿಯಲ್ಲಿ ಜನಿಸಿದರು. ಇವರು, ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಇತಿಹಾಸದಲ್ಲಿ ಬಿಎ (ಆನರ್ಸ್) ಪದವಿ ಮತ್ತು ದೆಹಲಿ ವಿಶ್ವವಿದ್ಯಾಲಯದಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ.

ಮಿಶ್ರಾ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. 1996ರಲ್ಲಿ ಪುರಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಗೆಲುವು ಪಡೆದರು. ನಂತರ ಅವರು ನವೀನ್ ಪಟ್ನಾಯಕ್ ಅವರ ಬಿಜು ಜನತಾದಳ (ಬಿಜೆಡಿ) ಸೇರಿದರು. 2009, 2014 ಮತ್ತು 2019ರಲ್ಲಿ ಮರು ಆಯ್ಕೆಯಾಗಿದ್ದರು.

ಅವರ ಅಧಿಕಾರಾವಧಿಯಲ್ಲಿ, ಹಣಕಾಸು ಸ್ಥಾಯಿ ಸಮಿತಿ, ವ್ಯವಹಾರ ಸಲಹಾ ಸಮಿತಿ, ರಕ್ಷಣಾ ಸಚಿವಾಲಯದ ಸಮಾಲೋಚನಾ ಸಮಿತಿ, ನಾಗರಿಕ ವಿಮಾನಯಾನ ಸ್ಥಾಯಿ ಸಮಿತಿ ಸೇರಿದಂತೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಸಮಾಲೋಚನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬೆಳಗ್ಗಿನ ಜಾವ 4 ಗಂಟೆ ವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗ್ತಿತ್ತಾ? – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

ಮೊಯಿತ್ರಾ ಈ ಹಿಂದೆ ಡ್ಯಾನಿಶ್ ಫೈನಾನ್ಸಿಯರ್ ಲಾರ್ಸ್ ಬ್ರೋರ್ಸನ್ ಅವರನ್ನು ವಿವಾಹವಾಗಿದ್ದರು. ಈ ವಿಚಾರವನ್ನು ಸಾಕಷ್ಟು ಖಾಸಗಿಯಾಗಿ ಇಟ್ಟುಕೊಂಡಿದ್ದರು. ಆದರೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮದುವೆ ಮತ್ತು ಅಂತಿಮವಾಗಿ ಇಬ್ಬರು ದೂರಾದ ಬಗ್ಗೆ ಸಂಸದೆ ದೃಢಪಡಿಸಿದ್ದರು.

Share This Article