ಗದಗ: ಮೆಕ್ಕೆಜೋಳ (Maize) ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ (Laxmeshwar) ಪಟ್ಟಣದಲ್ಲಿ ರೈತರ ಪ್ರತಿಭಟನೆ (Farmers Protest) ತೀವ್ರಗೊಂಡಿದೆ.
ಕಳೆದ 18 ದಿನಗಳಿಂದ ಸಮಗ್ರ ರೈತ ಸಂಘಟನೆಗಳ ಒಕ್ಕೂಟದಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಇಂದು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಡು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಪ್ರಯಾಣಿಕರು ಪರದಾಡಿದರು.
ಶೀಘ್ರದಲ್ಲೆ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರ ಪ್ರಾರಂಭಿಸದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಆಗಮಿಸಿ ಅನ್ನದಾತರನ್ನು ಮನವೊಲಿಸಲು ಮುಂದಾದರು. ಇದನ್ನೂ ಓದಿ: ರಾಜ್ಯದ ಐದು ಜಿಲ್ಲೆಗಳಲ್ಲಿ ಅಂತರ್ಜಲದ ವಿಪರೀತ ಬಳಕೆ


