ಹೆಸರಿಗೆ ಬ್ಯೂಟಿಪಾರ್ಲರ್, ನಡೆಯೋದು ವೇಶ್ಯಾವಾಟಿಕೆ – ನಡೀತಿತ್ತು ಬ್ಲೂ ಫಿಲ್ಮ್ ಶೂಟಿಂಗ್!

Public TV
1 Min Read

ಮೈಸೂರು: ಬ್ಯೂಟಿ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎರಡು ಬ್ಯೂಟಿ ಪಾರ್ಲರ್ ಗಳ ಮೇಲೆ ದಾಳಿ ನಡೆಸಿದ ಪೊಲೀಸರು 7 ಯುವತಿಯರನ್ನು ರಕ್ಷಿಸಿದ್ದಾರೆ. ಇದೇ ವೇಳೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಪುರುಷರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮೈಸೂರಿನ ವಿಜಯನಗರ ಪೊಲೀಸರು ಹಾಗೂ ಒಡನಾಡಿ ಸಂಸ್ಥೆಯವರು ಜಂಟಿಯಾಗಿ ಶನಿವಾರ ಸಂಜೆ 7 ಗಂಟೆಗೆ ಎರಡು ಬ್ಯೂಟಿ ಪಾರ್ಲರ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಇದೇ ವೇಳೆ ಬ್ಯೂಟಿ ಪಾರ್ಲರ್ ಗಳಲ್ಲಿ ಬ್ಲೂಫಿಲ್ಮ್ ಚಿತ್ರೀಕರಿಸುತ್ತಿದ್ದರು ಎಂಬ ವಿಚಾರವೂ ಬೆಳಕಿಗೆ ಬಂದಿದೆ.

ಹೂಟಗಳ್ಳಿಯಲ್ಲಿರುವ ಐಶ್ವರ್ಯ ಬ್ಯೂಟಿ ಪಾರ್ಲರ್ ಹಾಗೂ ವಿಜಯನಗರ ವಾಟರ್ ಟ್ಯಾಂಕ್ ಸಮೀಪ ಚಂದನ್ ಬ್ಯೂಟಿ ಪಾರ್ಲರ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ 7 ಯುವತಿಯರನ್ನು ಪೊಲೀಸರು ರಕ್ಷಣೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 5 ಪುರುಷರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಪಾರ್ಲರ್ ಗಳಿಗೆ ಬರುತ್ತಿದ್ದ ಕೆಲವು ಯುವತಿರ ನಗ್ನ ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದ ವಿಚಾರವನ್ನು ಬಾಯಿ ಬಿಟ್ಟಿದ್ದಾರೆ. ಬಳಿಕ ಇದೇ ವೀಡಿಯೋ ಮುಂದಿಟ್ಟುಕೊಂಡು ಪಾರ್ಲರ್ ಗೆ ಬರುತ್ತಿದ್ದ ಗ್ರಾಹಕರಿಗೆ ಬ್ಲ್ಯಾಕ್ ಮೇಲೆ ಮಾಡಿ ಅವರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದರು. ಇದರ ಚಿತ್ರೀಕರಣವನ್ನೂ ಆರೋಪಿಗಳು ಮಾಡುತ್ತಿದ್ದರು ಎಂಬ ಅಂಶ ಬಯಲಾಗಿದೆ. ಈ ಪ್ರಕರಣದ ಕಿಂಗ್ ಪಿನ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆ ಎನ್ನಲಾಗಿದೆ.

ಸದ್ಯ ಪೊಲೀಸರು ಒಂದು ಕಾರು ಹಾಗೂ ಮೂರು ಬೈಕ್ ಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *