– ಪೋಸ್ಟ್ ಮಾರ್ಟಂ ಬಳಿಕ ಸಾವಿಗೆ ನಿಖರ ಕಾರಣ ಬಯಲು
ಮಲಯಾಳಂ ನಟ, ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ (Kalabhavan Navas) (51) ಅವರು ಕೊಚ್ಚಿಯ ಚೊಟ್ಟನಿಕ್ಕಾರಾದಲ್ಲಿರುವ (Chottanikkaraa) ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಿನಿಮಾ ಚಿತ್ರೀಕರಣಕ್ಕಾಗಿ ಹೋಟೆಲ್‌ವೊಂದರಲ್ಲಿ ತಂಗಿದ್ದ ಅವರು ಹೃದಯಾಘಾತದಿಂದ (Heart Attack) ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹೋಟೆಲ್ ಸಿಬ್ಬಂದಿ ರೂಂಗೆ ಹೋದಾಗ ವಿಷಯ ತಿಳಿದಿದ್ದು, ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ತೇಜಸ್ವಿ ಯಾದವ್ ಆರೋಪ ಸುಳ್ಳು – ಕರಡು ಮತದಾರರ ಪಟ್ಟಿಯಲ್ಲಿ ಹೆಸರಿದೆ: ಚುನಾವಣಾ ಆಯೋಗ ಸ್ಪಷ್ಟನೆ
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಕೂಡ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದರು. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಳಿಕ ಸಾವಿಗೆ ನಿಖರವಾದ ಕಾರಣವೇನು ಎನ್ನೋದು ತಿಳಿದು ಬರಲಿದೆ.
ನವಾಸ್ ಅವರು ಮಲಯಾಳಂ ಚಿತ್ರರಂಗದಲ್ಲಿ ನಟ, ಮಿಮಿಕ್ರಿ ಕಲಾವಿದ, ಹಿನ್ನೆಲೆ ಗಾಯಕರಾಗಿ ವ್ಯಾಪಕ ಮೆಚ್ಚುಗೆ ಗಳಿಸಿದ್ದರು. ನವಾಸ್ ಅವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್ ಹೋರಾಟಕ್ಕೆ ಟಕ್ಕರ್ – ಆ.5ರಂದು ಗಾಂಧಿ ಪ್ರತಿಮೆ ಬಳಿ ಬಿಜೆಪಿಯೂ ಪ್ರತಿಭಟನೆ: ಬಿವೈವಿ