– ಕಾಂಗ್ರೆಸ್ ಶಾಸಕನ ಪಾತ್ರ ಇರೋದಾಗಿ ಬಿಜೆಪಿ ಆರೋಪ
ತಿರುವನಂತಪುರಂ: ಕೇರಳದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರೊಬ್ಬರು (Kerala Politician) ಮೂರು ವರ್ಷಗಳಿಂದ ತನಗೆ ಆಕ್ಷೇಪಾರ್ಹ ಸಂದೇಶ ಕಳಿಸುತ್ತಿದ್ದಾರೆ. ಅಲ್ಲದೇ ತನ್ನನ್ನು ಫೈವ್ ಸ್ಟಾರ್ ಹೋಟೆಲ್‌ಗೆ ಕರೆಯುತ್ತಿದ್ದಾರೆ ಎಂದು ಮಲಯಾಳಂ ನಟಿ ರಿನಿ ಜಾರ್ಜ್ (Rini George) ಆರೋಪಿಸಿದ್ದಾರೆ.
ರಾಜ್ಯದ ಪ್ರಮುಖ ರಾಜಕೀಯ ಪಕ್ಷದ ಕಾರ್ಯಕರ್ತೆಯೂ ಆಗಿರುವ ನಟಿ, ಅಶ್ಲೀಲ ಸಂದೇಶ (Objectionable Texts) ಕಳುಹಿಸಿದ ರಾಜಕಾರಣಿಯ ಹೆಸರನ್ನ ಬಹಿರಂಗಪಡಿಸಿಲ್ಲ. ಆದ್ರೆ ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ರಾಹುಲ್ ಮಂಕೂಟ್ಟಿಲ್ ಪಾತ್ರ ಇರುವುದಾಗಿ ಬಿಜೆಪಿ ಆರೋಪ ಮಾಡಿದೆ. ಇದನ್ನೂ ಓದಿ: ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
ನಟಿ ಹೇಳಿದ್ದೇನು?
ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರೊಬ್ಬರು ನನಗೆ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನ ಕಳುಹಿಸುತ್ತಿದ್ದಾರೆ. ಫೈವ್ ಸ್ಟಾರ್ ಹೋಟೆಲ್‌ಗೆ (five-star hotel) ಬರುವಂತೆ ಕರೆಯುತ್ತಿದ್ದಾರೆ. ಈ ಬಗ್ಗೆ ನಿಮ್ಮ ಪಕ್ಷದ ನಾಯಕರಿಗೆ ತಿಳಿಸುವುದಾಗಿ ಹೇಳಿದ್ರೆ, ಹೇಳುವಂತೆ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಪಕ್ಷದ ನಾಯಕರಿಗೆ ದೂರು ನೀಡಿದ್ರೆ ನಿರ್ಲಕ್ಷ್ಯ ಮಾಡಿದ್ದಾರೆ. ದೂರು ನೀಡಿದ ಬಳಿಕವೂ ಅವರಿಗೆ ಪಕ್ಷದೊಳಗೆ ಪ್ರಮುಖ ಹುದ್ದೆಯನ್ನ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದು ನನ್ನೊಬ್ಬಳ ಸಮಸ್ಯೆಯಲ್ಲ, ಹಲವಾರು ರಾಜಕಾರಣಿಗಳ ಪತ್ನಿಯರು ಹಾಗೂ ಹೆಣ್ಣುಮಕ್ಕಳೂ ತಮ್ಮೊಂದಿಗೆ ಈ ರೀತಿಯ ಅನುಭವ ಎದುರಿಸಿರುವುದಾಗಿ ಹೇಳಿಕೊಂಡಿದ್ದಾರೆ. ತಮ್ಮ ಕುಟುಂಬದಲ್ಲಿನ ಮಹಿಳೆಯರನ್ನೇ ರಕ್ಷಿಸಲು ಸಾಧ್ಯವಾಗದ ಈ ರಾಜಕಾರಣಿಗಳು ಯಾವ ಮಹಿಳೆಯನ್ನ ರಕ್ಷಿಸಲು ಸಾಧ್ಯ? ಅಂತಲೂ ರಿನಿ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ 6 ಪೊಲೀಸರು ಅರೆಸ್ಟ್
ಅಲ್ಲದೇ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಅನೇಕ ಮಹಿಳೆಯರು ಈ ರೀತಿಯ ಸಮಸ್ಯೆಗಳನ್ನ ಎದುರಿಸ್ತಿರೋದನ್ನ ನೋಡಿದ್ದೇನೆ. ಆದ್ರೆ ಯಾಕೆ ಯಾರೊಬ್ಬರೂ ಅದರ ಬಗ್ಗೆ ಒಂದು ಮಾತೂ ಆಡ್ತಿಲ್ಲ ಅಂತ ಯೋಚನೆ ಬಂತು. ಅವರೆಲ್ಲರ ಪರವಾಗಿ ನಾನು ದನಿ ಎತ್ತಲು ನಿರ್ಧರಿಸಿದೆ. ಅದಕ್ಕಾಗಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.
ʻಕೈʼ ಶಾಸಕನ ವಿರುದ್ಧ ಬಿಜೆಪಿ ಆರೋಪ
ರೀತಿ ತನಗೆ ಅಶ್ಲೀಲ ಸಂದೇಶ ಕಳಿಸಿದ ರಾಜಕಾರಣಿಯ ಹೆಸರು ಬಹಿರಂಹಪಡಿಸಿಲ್ಲ. ಆದ್ರೆ ಬಿಜೆಪಿಯು ಪಾಲಕ್ಕಾಡ್‌ನ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ವಿರುದ್ಧ ಆರೋಪ ಮಾಡಿದೆ. ಶಾಸಕನ ಕಚೇರಿ ಎದುರು ಪ್ರತಿಭಟನೆ ನಡೆಸಿ ರಾಜೀನಾಮೆಗೂ ಒತ್ತಾಯಿಸಿದೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
ರಾಹುಲ್ ಮಮ್‌ಕೂಟತಿಲ್ ಕೇರಳದ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.