ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

Public TV
2 Min Read

ನವದೆಹಲಿ: ಕಾಂಗ್ರೆಸ್ (Congress) ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಹಿನ್ನೆಲೆ ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ (Quits Rajya Sabha Post) ಮಲ್ಲಿಕಾರ್ಜುನ ಖರ್ಗೆ (Mallikarjun Kharge) ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಿನ್ನೆ ಕೊನೆಯ ದಿನವಾಗಿತ್ತು. ಕಡೆಯ ಹಂತದಲ್ಲಿ ಗಾಂಧೀ ಕುಟುಂಬದ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿ ಸ್ಪರ್ಧೆಯಲ್ಲಿ ಉಳಿದುಕೊಂಡಿದ್ದಾರೆ. ಈಗಾಗಲೇ ಸ್ಪರ್ಧೆಯಲ್ಲಿರುವ ಶಶಿ ತರೂರ್ (Shashi Tharoor) ಮತ್ತು ಖರ್ಗೆ ನಡುವೆ ಪೈಪೋಟಿ ನಡೆಯುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ದೇಶದಲ್ಲಿ 5G ಸೇವೆಗೆ ಚಾಲನೆ – ಯಾವ ನಗರಗಳಲ್ಲಿ ಆರಂಭದಲ್ಲಿ ಸಿಗುತ್ತೆ? ಎಷ್ಟು ಸ್ಪೀಡ್ ಇರುತ್ತೆ?

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿದ ಬೆನ್ನಲ್ಲೇ ಗಾಂಧೀ ಕುಟುಂಬದ ಆಪ್ತರಾಗಿರುವ ಖರ್ಗೆ ಕಣಕ್ಕಿಳಿದರು. ಎಐಸಿಸಿ (AICC) ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಈಗಿರುವ ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‍ನಲ್ಲಿರುವ ಒಬ್ಬರಿಗೆ ಒಂದು ಹುದ್ದೆ ಎಂಬ ನಿಯಮಾನುಸಾರ ಖರ್ಗೆ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಪಾಕ್ ಸರ್ಕಾರದ ಟ್ವಿಟ್ಟರ್ ಖಾತೆಗೆ ನಿರ್ಬಂಧ ಹೇರಿದ ಭಾರತ

ಮಲ್ಲಿಕಾರ್ಜುನ ಖರ್ಗೆ, ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರಂತಹ ವಿರೋಧ ಪಕ್ಷಗಳ ನಾಯಕರ ಜೊತೆ ಉತ್ತಮ ಸಂಪರ್ಕ ಹಾಗೂ ಸಂಬಂಧ ಇರಿಸಿಕೊಂಡಿದ್ದಾರೆ. ಖರ್ಗೆ ಅವರ ಬದ್ಧತೆ ಮತ್ತು ಕಾರ್ಯವೈಖರಿಯನ್ನು ಪಕ್ಷ ಮೆಚ್ಚಿಕೊಂಡಿದೆ. ಅಲ್ಲದೇ ಗಾಂಧೀ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವುದರಿಂದಾಗಿ ಖರ್ಗೆಗೆ ಇದು ಪ್ಲಸ್ ಪಾಯಿಂಟ್ ಆಗಿದೆ. ಜೊತೆಗೆ ಖರ್ಗೆ ಅವರು ಹಿಂದಿಯಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ. ಹೀಗಾಗಿ ಹಿಂದಿ ಮಾತನಾಡುವ ಪ್ರದೇಶಗಳಲ್ಲಿ ಕೂಡ ಅವರು ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಹಾಗಾಗಿ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟಕೇರುವುದು ಬಹುತೇಕ ಖಚಿತ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವವರು ನಾಮಪತ್ರ ಹಿಂಪಡೆಯಲು ಅ.8 ಕೊನೆಯ ದಿನವಾಗಿದ್ದು, ಅ.17 ರಂದು ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ 4ರವರೆಗೆ ಚುನಾವಣೆ ನಡೆಯಲಿದೆ. ಅ.19ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *