ಕಾಂಗ್ರೆಸ್ ಸೋಲಿಗೆ ಗಾಂಧಿ ಕುಟುಂಬದವರಷ್ಟೇ ಹೊಣೆ ಅಲ್ಲ: ಮಲ್ಲಿಕಾರ್ಜುನ ಖರ್ಗೆ

Public TV
1 Min Read

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಉನ್ನತ ನಾಯಕತ್ವ ಕೊರತೆ ಮಾತ್ರ ಕಾರಣವಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ 5 ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಲು ಗಾಂಧಿ ಕುಟುಂಬವರಷ್ಟೇ ಹೊಣೆಯಲ್ಲ, ಪ್ರತಿಯೊಬ್ಬ ರಾಜ್ಯ ನಾಯಕರು ಮತ್ತು ಸಂಸದರು ಸಹ ಹೊಣೆಯಾಗಿದ್ದಾರೆ ಎಂದು ನಾವೆಲ್ಲರೂ ಸೋನಿಯಾ ಗಾಂಧಿ ಅವರಿಗೆ ಹೇಳಿದ್ದೇವೆ. ನಾವು ಅವರ ಮೇಲೆ ಮತ್ತೆ ನಂಬಿಕೆ ಇಟ್ಟಿದ್ದೇವೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 2 ಕೋಟಿ ಸಾಲ ಮಾಡಿರುವ ಸಿದ್ದರಾಮಯ್ಯಗೆ ಭಾರತ ರತ್ನ ನೀಡಲಿ: ಸಾ.ರಾ ಮಹೇಶ್

ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷವನ್ನು ಬಲಪಡಿಸುವ ಕಾರ್ಯತಂತ್ರಗಳ ಕುರಿತಂತೆ ಚರ್ಚಿಸಲಾಯಿತು. ನಾವು ಬಿಜೆಪಿ ಮತ್ತು ಅದರ ಸಿದ್ಧಾಂತದ ವಿರುದ್ಧ ಹೋರಾಡುತ್ತೇವೆ. ನಮ್ಮ ಸಿದ್ಧಾಂತವನ್ನು ಎತ್ತಿ ಹಿಡಿಯುತ್ತೇವೆ ಮತ್ತು ಮುಂದಿನ ಚುನಾವಣೆಯಲ್ಲಿ ನಾವು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಭಾವಿಸುತ್ತೇವೆ ಎಂದಿದ್ದಾರೆ.

ಇತ್ತೀಚೆಗಷ್ಟೇ ನಡೆದ ಪಂಜಾಬ್, ಗೋವಾ, ಉತ್ತರ ಪ್ರದೇಶ, ಮಣಿಪುರ ಮತ್ತು ಉತ್ತರಾಖಂಡ್ ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದೆ. ಮಾರ್ಚ್ 10 ರಂದು ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ BJP ಗೆಲುವಿಗೆ BSP ಕಾರಣ: ಅಶೋಕ್ ಗೆಹ್ಲೋಟ್


Mallikarjun Kharge, Congress, Assembly elections, Sonia Gandhi, New Delhi

Share This Article
Leave a Comment

Leave a Reply

Your email address will not be published. Required fields are marked *