ಮಾಳವಿಕಾ ನಾಯರ್ ಹುಟ್ಟು ಹಬ್ಬಕ್ಕೆ ಪೋಸ್ಟರ್ ಗಿಫ್ಟ್

Public TV
1 Min Read

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಕೃಷ್ಣಂ ಪ್ರಣಯ ಸಖಿ ಚಿತ್ರದ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು.

ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ,  ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

Share This Article