ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!

Public TV
2 Min Read

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್‌ ಅಂಬಾನಿ ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ (Anant Ambani – Radhika Merchant) ಅವರ ಪುತ್ರಿ ರಾಧಿಕಾ ಮರ್ಚೆಂಟ್‌ ಅವರ ಅದ್ಧೂರಿ ವಿವಾಹ ಮಹೋತ್ಸವಕ್ಕೆ ರಾಜಕೀಯ ನಾಯಕರ ದಂಡೇ ಹರಿದು ಬಂದಿದೆ.

ದೇಶ-ವಿದೇಶಗಳಿಂದ ಬಂದಿದ್ದ ಸಾವಿರಾರು ಗಣ್ಯರು ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಶನಿವಾರವಾರ ಇಂದು ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ರಾಜಕೀಯ ನಾಯಕರು ಭಾಗಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳಿಗೆ ಆಶೀರ್ವದಿಸಿದ್ದಾರೆ. ಈ ಪೈಕಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರೂ ಸಹ ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಅನಂತ್‌ ಮದುವೆಯಲ್ಲಿ ರಾಜಕೀಯ ನಾಯಕರ ದಂಡು:
ಅನಂತ್‌-ರಾಧಿಕಾ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav), ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್, ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಆರ್‌ಪಿಐ ನಾಯಕ ರಾಮದಾಸ್ ಅಠಾವಳೆ, ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಹಿರಿಯ ನಾಯಕಿ ಸುಪ್ರಿಯಾ ಸುಳೆ ಸಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಕಾಂಗ್ರೆಸ್‌ ನಾಯಕರೂ ಭಾಗಿ:
ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಕಾಂಗ್ರೆಸ್‌ ಪಕ್ಷದ ಅನೇಕ ನಾಯಕರೂ ಪಾಲ್ಗೊಂಡಿದ್ದಾರೆ. ಕಾಂಗ್ರೆಸ್‌ನ ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಅಜಯ್ ಮಾಕನ್, ಸಲ್ಮಾನ್ ಖುರ್ಷಿದ್, ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜೀವ್ ಶುಕ್ಲಾ ಸೇರಿದಂತೆ ಅನೇಕ ಹಿರಿಯ ನಾಯಕರು ಪಾಲ್ಗೊಂಡು ನವದಂಪತಿಗಳಿಗೆ ಆಶೀರ್ವದಿಸಿದ್ದಾರೆ.

Share This Article