ಯುಪಿ ಚುನಾವಣೆಯಲ್ಲಿ ಅಖಿಲೇಶ್ ಯಾದವ್‍ಗೆ ನಮ್ಮ ಬೆಂಬಲ: ಮಮತಾ ಬ್ಯಾನರ್ಜಿ

By
2 Min Read

ಲಕ್ನೋ: ಉತ್ತರ ಪ್ರದೇಶ ಚುನಾವಣೆಯಲ್ಲಿ ಎಸ್‍ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬೆಂಬಲಿಸುತ್ತೇವೆ. ಆದರೆ ನಾವು ಬಿಜೆಪಿಯನ್ನು ಓಡಿಸಬೇಕು ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದರು.

ಯುಪಿ ಚುನಾವಣೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಬೆಂಬಲಿಸುವುದಾಗಿ ಖಚಿತಪಡಿಸಿದರು. ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

Akhilesh Yadav

ಉತ್ತರ ಪ್ರದೇಶಕ್ಕೆ ಈಗ ಚುನಾವಣೆ ದೃಷ್ಟಿಯಿಂದ ನಾವು ಹೋಗುವುದಿಲ್ಲ. ಆದರೆ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರನ್ನು ಬೆಂಬಲಿಸಲಿದ್ದೇವೆ. ನಮ್ಮ ಟಿಎಂಸಿ ಪಕ್ಷ 2024 ರ ಲೋಕಸಭೆ ಚುನಾವಣೆಯಲ್ಲಿ ಯುಪಿಯಿಂದ ಸ್ಪರ್ಧಿಸಲಿದೆ ಎಂದು ಹೇಳಿದರು.

ಇತರ ರಾಜ್ಯಗಳ ಚುನಾವಣೆ ಕುರಿತು ಮಾತನಾಡುವಾಗ ಅವರು, ಹಿಂದೆ ಜನರು ಟಿಎಂಸಿ ಎಂದರೆ ಪಶ್ಚಿಮ ಬಂಗಾಳ ಎಂದು ಕರೆಯುತ್ತಿದ್ದರು. ಆದರೆ ನಾವು ನಮ್ಮ ಪಕ್ಷವನ್ನು ವಿಸ್ತರಿಸಿದ್ದೇವೆ. ದೇಶದ ಇತರ ಭಾಗಗಳಿಗೂ ನಮ್ಮ ಪಕ್ಷವನ್ನು ವಿಸ್ತರಿಸಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

ತ್ರಿಪುರಾದಲ್ಲಿ ನಮ್ಮ ಪಕ್ಷದ ಪರವಾಗಿ 20% ಕ್ಕಿಂತ ಹೆಚ್ಚು ಮತದಾರರಿದ್ದಾರೆ. ನಾವು ಮುಂದಿನ ಎರಡು ವರ್ಷಗಳಲ್ಲಿ ಬಂಗಾಳವನ್ನು ಬಲಿಷ್ಠಗೊಳಿಸುತ್ತೇವೆ. ಇದರಿಂದ 2024 ರ ಲೋಕಸಭಾ ಚುನಾವಣೆಯಲ್ಲಿ ನಾವು ಎಲ್ಲ 42 ಸ್ಥಾನಗಳನ್ನು ಗೆಲ್ಲುತ್ತೇವೆ. ಇಲ್ಲಿಂದ ಬಿಜೆಪಿಯನ್ನು ಓಡಿಸಬೇಕು. ಟಿಎಂಸಿಯಲ್ಲಿ ಏಕರೂಪತೆ ಇದೆ. ನಾನು ಎಲ್ಲರಿಗೂ ಕೇಳಿಕೊಳ್ಳುವುದು ಇಷ್ಟೆ, ನಮ್ಮ ಪಕ್ಷವನ್ನು ಬಲಪಡಿಸಿ ಎಂದು ಮನವಿ ಮಾಡಿದರು.

ಮೇಘಾಲಯ ಮತ್ತು ಪಂಜಾಬ್‍ನಲ್ಲಿ ಬಿಜೆಪಿಯ ಆಜ್ಞೆಯ ಮೇರೆಗೆ ಕಾಂಗ್ರೆಸ್ ಕೆಲಸ ಮಾಡುತ್ತಿರುವುದಕ್ಕೆ ನನಗೆ ಬೇಸರವಾಗಿದೆ. ನಾನು ರವೀಂದ್ರನಾಥ ಟ್ಯಾಗೋರ್ ಅವರ ಹಾದಿಯನ್ನು ಅನುಸರಿಸಲಿದ್ದೇನೆ. ಎಕ್ಲಾ ಚೋಲೋ ರೇ(ನಾವು ಏಕಾಂಗಿಯಾಗಿ ಮುಂದುವರಿಯೋಣ) ನಾವು ಹೋರಾಡಬೇಕಾಗಿದೆ ಎಂದು ಕರೆ ನೀಡಿದರು. ಇದನ್ನೂ ಓದಿ:  ಜನಸ್ನೇಹಿ ಬಜೆಟ್, ಎಲ್ಲರಿಗೂ ಸಹಾಯವಾಗುವ ಕಾರ್ಯಕ್ರಮಗಳು: ಆರ್.ಅಶೋಕ್

ಮಮತಾ ಬ್ಯಾನರ್ಜಿ ಅವರು 1998 ರಲ್ಲಿ  ಕಾಂಗ್ರೆಸ್‍ನಿಂದ ಹೊರಬಂದ ನಂತರ ಟಿಎಂಸಿ ಪಕ್ಷ ಸ್ಥಾಪಿಸಿದರು. ಆಗಿನಿಂದ ಪಕ್ಷದ ನೇತೃತ್ವವನ್ನು ಅವರೇ ವಹಿಸಿಕೊಂಡಿದ್ದಾರೆ. 2001 ಮತ್ತು 2006 ರ ವಿಧಾನಸಭಾ ಚುನಾವಣೆಗಳಲ್ಲಿ ಎರಡು ವಿಫಲ ಪ್ರಯತ್ನಗಳ ನಂತರ, ಪಕ್ಷವು 2011 ರಲ್ಲಿ ಅಧಿಕಾರಕ್ಕೆ ಬಂದಿತು. ರಾಜ್ಯ ವಿಧಾನಸಭೆಯ 294 ಸ್ಥಾನಗಳಲ್ಲಿ 213 ಸ್ಥಾನಗಳನ್ನು ಗಳಿಸಿದ ನಂತರ ಕಳೆದ ವರ್ಷ ಮೇ ತಿಂಗಳಲ್ಲಿ ಅಧಿಕಾರಕ್ಕೆ ಮತ್ತೆ ಬಂದಿತು.

Share This Article
Leave a Comment

Leave a Reply

Your email address will not be published. Required fields are marked *