ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

Public TV
1 Min Read

ಚಾಮರಾಜನಗರ: ಸಾಮಾಜಿಕ ಬಹಿಷ್ಕಾರದಿಂದ (Social Ostracism) ಮನನೊಂದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆಯ (Gundlupete) ಯಡವನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ವೈ.ಎಸ್ ಶಿವರಾಜು (45) ನೇಣಿಗೆ ಶರಣಾದ ವ್ಯಕ್ತಿ. ಮೃತನ ಸಹೋದರ ಮಹೇಶ್ ಎಂಬವರು ಬೇಗೂರು ಪೊಲೀಸ್ (Police) ಠಾಣೆಗೆ ದೂರು ಕೊಟ್ಟಿದ್ದು ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಭೈರತಿ ಸುರೇಶ್ ಆಪ್ತ ಸಿಸಿಬಿ ವಶಕ್ಕೆ

ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಸಂಬಂಧಿಕರು ಬೇಗೂರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಬಳಿಕ ಡಿವೈಎಸ್‍ಪಿ ಲಕ್ಷ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ, ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೇ ತನಿಖೆ ನಡೆಸಿ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.

ಪ್ರಕರಣ ಸಂಬಂಧ ಗ್ರಾಮದ ಮುಖಂಡರಾದ ಕೃಷ್ಣ, ಚಂದು, ರೇವನಾಯಕ, ಸಂತೋಷ್, ಸಂದೇಶ್, ವೆಂಕಟರಮಣನಾಯಕ, ನಿಂಗನಾಯಕ, ಚಿಕ್ಕಬೆಳ್ಳನಾಯಕ, ಆಲತ್ತೂರು ಮಹದೇವನಾಯಕ, ಡಿ.ಮಹದೇವಮನಾಯಕ, ದೇವನಾಯಕ, ಚಿನ್ನಸ್ವಾಮಿ ನಾಯಕ, ರಂಗಸ್ವಾಮಿನಾಯಕ ಎಂಬ 13 ಮಂದಿ ವಿರುದ್ಧ ಬೇಗೂರು ಪೊಲೀಸರು ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಒಳಗೆ ಬರಬೇಡ ಎಂದ ಪತಿಯನ್ನು ಬಡಿದು ಕೊಂದ ಪತ್ನಿ! 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್