ಹಾಸನ: ಸಂತೆ ಮುಗಿಸಿಕೊಂಡು ಮನೆಗೆ ಹೊರಟಿದ್ದ ವ್ಯಕ್ತಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಬೇಲೂರಿನಲ್ಲಿ (Beluru) ನಡೆದಿದೆ.
ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ಆನಂದ್ (52) ಮೃತ ದುದೈವಿ ಎಂದು ಗುರುತಿಸಲಾಗಿದೆ. ಅವರು ಟ್ರ್ಯಾಕ್ಟರ್‌ನಲ್ಲಿ ಉಳುಮೆ ಮಾಡಿ ಬೇಲೂರು ಸಂತೆಗೆ ಬಂದಿದ್ದರು. ಸಂತೆಯಲ್ಲಿ ತರಕಾರಿ, ದಿನಸಿ ಖರೀದಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಯಗಚಿ ಸೇತುವೆ ಬಳಿ ದಿಢೀರ್ ಕುಸಿದು ಬಿದ್ದಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿ ಬರುವಾಗ ಕುಸಿದುಬಿದ್ದು 23 ವರ್ಷದ ಯುವಕ ಸಾವು
ಕೂಡಲೇ ಅವರನ್ನು ಸ್ಥಳೀಯರು ಬೇಲೂರು ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮಗಳ ಆತ್ಮಹತ್ಯೆ ಕಣ್ಣಾರೆ ಕಂಡ ತಾಯಿ – ಶವ ಇಳಿಸಿ ಅದೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವು