ಮದುವೆಯಾಗ್ತೀನಿ ಅಂತಾ ಎಣ್ಣೆ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುರುಳ

By
1 Min Read

– ಕೃತ್ಯದ ವೀಡಿಯೋ ವೈರಲ್‌; ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಆಕ್ರೋಶ

ಭೋಪಾಲ್: ಮದ್ಯ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ (Madhya Pradesh) ಉಜ್ಜಯಿನಿಯಲ್ಲಿ (Ujjain) ನಡೆದಿದೆ.

ರಸ್ತೆಯಲ್ಲೇ ದುರುಳ ಮಹಿಳೆ ಮೇಲೆ ಅತ್ಯಾಚಾರ ನಡೆಸುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಲೈಂಗಿಕ ದೌರ್ಜನ್ಯ ಎಸಗುವ ಮುನ್ನ ವ್ಯಕ್ತಿ ಕುಡಿದಿದ್ದ ಎನ್ನಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅಲೆ ಅಬ್ಬರಕ್ಕೆ ಸಮುದ್ರದಲ್ಲಿ ಸಿಲುಕಿಕೊಂಡ ಮಲ್ಪೆ ಬೋಟ್

ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ವ್ಯಕ್ತಿ ಆಕೆಗೆ ಮದ್ಯ ನೀಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದ. ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಅಪರಾಧದ ಬಗ್ಗೆ ತಿಳಿದುಬಂದಿದ್ದು, ವ್ಯಕ್ತಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇವ್ನನ್ನು ಉಳಿಸಬೇಡಿ, ಕೊಂದು ಎಸೆದು ಬಿಡಿ – ಶೆಡ್‌ನಲ್ಲಿ ಪವಿತ್ರಾ ಹೇಳಿದ್ದೇನು?

ಆರೋಪಿಯು ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಆಕೆ ಮದ್ಯ ಸೇವಿಸುವಂತೆ ಮಾಡಿ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Share This Article