ಮಲಗಿದ್ದ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ!

Public TV
0 Min Read

ಚಿಕ್ಕಬಳ್ಳಾಪುರ: ಮಲಗಿದ್ದ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಣಿವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ವೆಂಕಟೇಶ್(45) ಕೊಲೆಯಾದ ವ್ಯಕ್ತಿ. ಗ್ರಾಮದ ಅರಳಿಕಟ್ಟೆ ಮೇಲೆ ಮಲಗಿದ್ದ ವೆಂಕಟೇಶ್ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ವಾನದಳ, ಬೆರಳಚ್ಚು ತಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಆದರೆ ಕೊಲೆಗೆ ಕಾರಣ ತಿಳಿದುಬಂದಿಲ್ಲ.

Share This Article
Leave a Comment

Leave a Reply

Your email address will not be published. Required fields are marked *