ಭೋಪಾಲ್: ಕಾಮುಕನೊಬ್ಬ 58 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಆಕೆಯ ಗುಪ್ತಾಂಗವನ್ನು ರೇಜರ್ ನಿಂದ ಗಾಯಗೊಳಿಸಿದ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.
ಇಲ್ಲಿನ ಪರಾಸಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ gತ್ರಿ ಈ ಘಟನೆ ನಡದಿದೆ. ಆರೋಪಿ 25 ವರ್ಷದ ಸುಖ್‍ಲಾಲ್ ಬಲಾವಿಯನ್ನು ಬಂಧಿಸಿರುವುದಾಗಿ ಇನ್ಸ್ ಪೆಕ್ಟರ್ ದೀಪಕ್ ಸೋಂಟಿ ಅರ್ಗುಲಾವರ್ ತಿಳಿಸಿದ್ದಾರೆ.
ನಿರುದ್ಯೋಗಿಯಾಗಿದ್ದ ಆರೋಪಿ ಯುವಕ ಮದ್ಯದ ಅಮಲಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಆಕೆಯ ಗುಪ್ತಾಂಗವನ್ನು ರೇಜರ್ ನಿಂದ ಗಾಯಗೊಳಿಸಿದ್ದಾನೆ. ಮಹಿಳೆ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಮನೆಯಲ್ಲಿ ಒಬ್ಬರೇ ವಾಸವಿದ್ದರು ಅಂತ ಅವರು ಹೇಳಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಸಂತ್ರಸ್ತೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಹಿಳೆಯ ದೂರಿನನ್ವಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.