ಹಾಸನ: ಏ.9 ರಂದು ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ (Kerala Assembly Elections 2026) ಮತ ಚಲಾಯಿಸಲು ತೆರಳುತ್ತಿದ್ದಾಗ ಕಾರು ಅಪಘಾತವಾಗಿ (Accident) ಕಾರಿನಲ್ಲಿದ್ದ ವ್ಯಕ್ತಿ ಗಂಭಿರವಾಗಿ ಗಾಯಗೊಂಡ ಘಟನೆ ಸಕಲೇಶಪುರದ (Sakleshpura) ಮಳಲಿ ಬೈಪಾಸ್ ಬಳಿ ನಡೆದಿದೆ.
ಗಾಯಾಳುವನ್ನು ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಹೈದರಾಬಾದ್ನಲ್ಲಿ ಕೆಲಸ ಮಾಡುತ್ತಿದ್ದ ಖಾದರ್ ಮತ ಚಲಾಯಿಸಲು ಕಾರಿನಲ್ಲಿ ಕೇರಳಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ, ರಸ್ತೆಯಿಂದ ಕೆಳಗೆ ಹಾರಿ, ಸುಮಾರು 25 ಅಡಿ ದೂರದಲ್ಲಿ ನಿಂತಿದೆ. ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಇನ್ನೋವಾ ಕಾರು – ಚಾಲಕನಿಗೆ ಗಂಭೀರ ಗಾಯ
ಗಾಯಾಳುವಿಗೆ ಸಕಲೇಶಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಹಾಸನದಲ್ಲಿ ಡೀಸೆಲ್ ಟ್ಯಾಕರ್ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

