ಗಾಂಧೀನಗರ: ವ್ಯಕ್ತಿಯೊಬ್ಬ ಟಾಯ್ಲೆಟ್ನಿಂದಲೇ ನ್ಯಾಯಾಲಯದ ವಿಚಾರಣೆಗೆ ಹಾಜರಾದ ವಿಚಿತ್ರ ಘಟನೆಯೊಂದು ಗುಜರಾತ್ ಹೈಕೋರ್ಟ್ನಲ್ಲಿ (Gujarat High Court) ನಡೆದಿದೆ.
ಪ್ರಕರಣವೊಂದರಲ್ಲಿ ಎಫ್ಐಆರ್ ರದ್ದುಗೊಳಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಈ ಪ್ರಸಂಗ ನಡೆದಿದೆ. ಆನ್ಲೈನ್ನಲ್ಲಿ ವಿಚಾರಣೆ ಆರಂಭಿಸಲಾಯಿತು. ಈ ವೇಳೆ ಸೂರತ್ನ ದೂರುದಾರ ಅಬ್ದುಲ್ ಸಮದ್ ಶೌಚಾಲಯದಲ್ಲೇ ಕುಳಿತು ವಿಚಾರಣೆಯಲ್ಲಿ ಪಾಲ್ಗೊಂಡರು. ಇದನ್ನೂ ಓದಿ: ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್
A video showing a man attending Gujarat High Court virtual proceedings while seated on a toilet and apparently relieving himself has gone viral on the social media.
Read full story: https://t.co/FbendKMD2M #GujaratHighCourt #VirtualHearings #VideoConferencehearing… pic.twitter.com/spyxMiptiO
— Bar and Bench (@barandbench) June 27, 2025
ನ್ಯಾಯಮೂರ್ತಿ ನಿರ್ಜಾರ್ ದೇಸಾಯಿ ಅವರು ಅರ್ಜಿ ವಿಚಾರಣೆ ನಡೆಸಿದ್ದರು. ಯೂಟ್ಯೂಬ್ನಲ್ಲಿನ ವೀಡಿಯೊ ಲಿಂಕ್ ಮೂಲಕ ಹಾಜರಾದ ಸಮದ್, ಈ ಸಂದರ್ಭದಲ್ಲಿ ಶೌಚಾಲಯವನ್ನು ಬಳಸುತ್ತಿರುವುದು ಕಂಡುಬಂತು. ಈ ವೀಡಿಯೊ ವೈರಲ್ ಆಗಿದೆ.
ಪ್ರಕರಣದ ಹಿನ್ನೆಲೆ
ಕಿಮ್ ರೈಲ್ವೆ ನಿಲ್ದಾಣದ ಬಳಿಯ ಜುಮ್ಮಾ ಮಸೀದಿಗೆ ಪ್ರಾರ್ಥನೆಗಾಗಿ ಸಮದ್ ಹೋಗಿದ್ದರು. ಮಸೀದಿಯ ಬಾಗಿಲು ತೆರೆದಾಗ ಆಕಸ್ಮಿಕವಾಗಿ ಮತ್ತೊಬ್ಬರಿಗೆ ಡಿಕ್ಕಿ ಹೊಡೆದಿದೆ. ಇದು ಪರಸ್ಪರರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಆರೋಪಿ ಮತ್ತು ಆತನ ಸಹೋದರ, ಸಮದ್ನನ್ನು ನಿಂದಿಸಿ ಹಲ್ಲೆ ನಡೆಸಿದ್ದರು. ಬಳಿಕ ಮಸೀದಿಗೆ ಬರಬಾರದೆಂದು ಬೆದರಿಕೆ ಹಾಕಿದ್ದರು. ಈ ಸಂಬಂಧ ಸೂರತ್ನ ಕಿಮ್ ಪೊಲೀಸ್ ಠಾಣೆಯಲ್ಲಿ ಸಮದ್ ದೂರು ದಾಖಲಿಸಿದ್ದರು. ಇದನ್ನೂ ಓದಿ: Bengaluru | ಬ್ರೇಕ್ ಫೇಲ್ ಆಗಿ ಡಿವೈಡರ್ಗೆ KSRTC ಬಸ್ ಡಿಕ್ಕಿ
ಕಳೆದ ಮಾರ್ಚ್ನಲ್ಲಿ ಕೂಡ ಗುಜರಾತ್ ಹೈಕೋರ್ಟ್ನಲ್ಲಿ ಇದೇ ರೀತಿ ಘಟನೆ ನಡೆದಿತ್ತು. ಆ ವ್ಯಕ್ತಿಗೆ ಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿತ್ತು.