ಹಣಕಾಸಿನ ವಿಚಾರಕ್ಕೆ ಟಿಪ್ಪರ್ ಹರಿಸಿ ವ್ಯಕ್ತಿಯ ಹತ್ಯೆ – ಇಬ್ಬರು ಗಂಭೀರ

Public TV
1 Min Read

ಕಾರವಾರ: ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿಸಿ ಕೊಲೆಗೈದ ಘಟನೆ ಉತ್ತರಕನ್ನಡದ ಕಾರವಾರದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತನನ್ನು ಓಲ್ವಿನ್ ಲೋಬೋ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕೇಶವ ನಾಯ್ಕ ಹಾಗೂ ವಸಂತ ನಾಯ್ಕ ಎಂದು ಗುರುತಿಸಲಾಗಿದೆ. ವಿನಾಯಕ ನಾರಾಯಣ ಭಟ್ ಎಂಬಾತ ಈ ಕೃತ್ಯ ಎಸಗಿದ್ದು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಕೇಶವ ನಾಯ್ಕನ ಜೊತೆ ಜಗಳವಾಡಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಮ್ರತಾ ಜೊತೆಗಿನ ಫ್ಲರ್ಟ್ ಬಗ್ಗೆ ಸ್ನೇಹಿತ್‌ಗೆ ಕುಟುಕಿದ ಮೈಕಲ್

ಗಲಾಟೆಯ ವಿಚಾರಕ್ಕೆ ಓಲ್ವಿನ್ ಲೋಬೋ, ಕೇಶವ ನಾಯ್ಕ ಹಾಗೂ ವಸಂತ ನಾಯ್ಕ ಆಟೋದಲ್ಲಿ ಇದ್ದ ವೇಳೆ ಆರೋಪಿ ವೇಗವಾಗಿ ಟಿಪ್ಪರ್ ತಂದು ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಚಾಲಕ ಓಲ್ವಿನ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಅಲ್ಲದೇ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಬಳಿಕ ಆರೋಪಿ ವಿನಾಯಕ ಭಟ್ ತಲೆ ಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಾರಾಟದಲ್ಲಿದ್ದ ವಿಮಾನದಲ್ಲೇ ಗಂಡ, ಹೆಂಡತಿ ಗಲಾಟೆ – ಬ್ಯಾಂಕಾಕ್‍ಗೆ ಹೊರಟಿದ್ದ ವಿಮಾನ ದೆಹಲಿಯಲ್ಲಿ ಲ್ಯಾಂಡ್

Share This Article