ನಿಧಿ ಆಸೆಗಾಗಿ ವ್ಯಕ್ತಿಯ ಬಲಿ – ಜ್ಯೋತಿಷಿ ಸೇರಿ ಇಬ್ಬರು ಅರೆಸ್ಟ್

Public TV
1 Min Read

ಚಿತ್ರದುರ್ಗ: ನಿಧಿ ಆಸೆಗಾಗಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆಯ ಪರಶುರಾಂಪುರದಲಿನಡೆದಿದೆ.

ಕೊಲೆಯಾದ ದುರ್ದೈವಿಯನ್ನು ಪ್ರಭಾಕರ್ (52) ಎಂದು ಗುರುತಿಸಲಾಗಿದೆ. ಅವರು ಪರಶುರಾಂಪುರದ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡುತ್ತಿದ್ದರು. ಆನಂದ ರೆಡ್ಡಿ (52) ಕೊಲೆಗೈದ ಆರೋಪಿಯಾಗಿದ್ದಾನೆ. ಆತ ಕುಂದುರ್ಪಿಯಲ್ಲಿ ಬಾರ್ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ. ಆನಂದ ರೆಡ್ಡಿಗೆ ಪಾವಗಡದ (Pavagada) ಜ್ಯೋತಿಷಿ ರಾಮಕೃಷ್ಣ, ಪಶ್ಚಿಮ ದಿಕ್ಕಿನಲ್ಲಿ ನರಬಲಿ ಕೊಟ್ಟರೆ ಚಿನ್ನ ಸಿಗಲಿದೆ ಎಂದು ಹೇಳಿದ್ದ. ಅದರಂತೆ ಕೊಲೆಮಾಡುವ ಉದ್ದೇಶದಿಂದಲೇ ಆರೋಪಿ ಕರ್ನಾಟಕಕ್ಕೆ ಬಂದಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಪಂಜಾಬ್ ಸಿಎಂ, ಎಲ್ಲ ಆಪ್ ಶಾಸಕರನ್ನು ಭೇಟಿಯಾದ ಕೇಜ್ರಿವಾಲ್ – ಪಂಜಾಬ್ ಸಿಎಂ ಮಾನ್ ಬದಲಾಗ್ತಾರಾ?

ಪ್ರಭಾಕರ್‌ಗೆ ಲಿಫ್ಟ್ ಕೊಡುವ ನೆಪದಲ್ಲಿ ಕರೆದೊಯ್ದು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಆರೋಪಿಯ ಬೈಕ್ ಡೀಟೈಲ್ ಪ್ರಕಾರ ಆತನನ್ನು ಪತ್ತೆ ಮಾಡಲಾಗಿದೆ. ಮಚ್ಚು ಹಾಗೂ ಬಟ್ಟೆಯನ್ನು ಪೊಲಿಸರು ಸೀಜ್ ಮಾಡಿದ್ದಾರೆ.

ಸದ್ಯ ಹಂತಕ ಹಾಗೂ ಜ್ಯೋತಿಷಿ ಇಬ್ಬರೂ ಪೊಲೀಸರ ಅತಿಥಿಯಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.  ಇದನ್ನೂ ಓದಿ: ರಣವೀರ್ ಅಲಹಾಬಾದಿಯಾ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ದೂರು

Share This Article