ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಯ ಗರ್ಭಿಣಿ ಮಾಡಿದ ಆರೋಪಿ ಅರೆಸ್ಟ್

Public TV
1 Min Read

ಹಾಸನ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜೀವನ್ (21) ಎಂದು ಗುರುತಿಸಲಾಗಿದೆ. ಆರೋಪಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಒಬ್ಬಳ ಜೊತೆ ಸಲುಗೆಯಿಂದ ಇದ್ದ. ಈ ವೇಳೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈಗ ವಿದ್ಯಾರ್ಥಿನಿ ಐದು ತಿಂಗಳ ಗರ್ಭಿಣಿಯಾದ ಬಳಿಕ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ವ್ಯಕ್ತಿ ಬಲಿ

ಸಮಾಜಕ್ಕೆ ಹೆದರಿ ವಿದ್ಯಾರ್ಥಿನಿ ತನ್ನ ಮೇಲಾಗಿರುವ ದೌರ್ಜನ್ಯವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಈಗ ಆಕೆಯ ದೇಹದಲ್ಲಾದ ಬದಲಾವಣೆಯ ಬಳಿಕ ಆತಂಕಗೊಂಡ ವಿದ್ಯಾರ್ಥಿನಿ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ನಂತರ ಬಾಲಕಿಯ ಪೋಷಕರು ಹಾಸನ (Hassan) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯ ವಿರುದ್ಧ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಕಟ್ಕೊಂಡ ಹೆಂಡತಿಗೆ ಕೈಕೊಟ್ಟು ಪಕ್ಕದ ಮನೆ ಆಂಟಿ ಜೊತೆ ಎಸ್ಕೇಪ್ ಆದ ಭೂಪ

Share This Article