ರಾಯಚೂರು: ಉದ್ಯೋಗ ಖಾತ್ರಿ (Udyog Khatri) ಕೆಲಸಕ್ಕೆ ಹೋಗಿ ಮನೆಗೆ ಮರಳುವ ವೇಳೆ ವ್ಯಕ್ತಿಯೊಬ್ಬರು ದಾರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು (Raichur) ತಾಲೂಕಿನ ಯಾಪಲದಿನ್ನಿ (Yapaladinni) ಗ್ರಾಮದಲ್ಲಿ ನಡೆದಿದೆ.
ಹುಸೇನಪ್ಪ ಮಡಿವಾಳ್ (45) ಮೃತ ವ್ಯಕ್ತಿ. ಬಿಸಿಲಿನ ತಾಪಮಾನಕ್ಕೆ ದಣಿದು, ವಿಶ್ರಾಂತಿ ಸಿಗದೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಾಪಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಹುಸೇನಪ್ಪ ಕೆಲಸ ಮುಗಿಸಿ ಮಧ್ಯಾಹ್ನ ಮನೆಗೆ ಬರುವಾಗ ದಾರಿಯಲ್ಲಿ ಕುಸಿದು ಬಿದ್ದಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತೆಗೆ ಸಾಗಿಸುವ ಮಾರ್ಗ ಮಧ್ಯೆ ಹುಸೇನಪ್ಪ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು
ಬಿಸಿಲಿನ ತಾಪಕ್ಕೆ ಲೋ ಬಿಪಿಯಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

