ಗರ್ಲ್ ಫ್ರೆಂಡ್ ಜೊತೆಗೆ ಶಾಪಿಂಗ್ – ರೆಡ್ ಹ್ಯಾಂಡ್ ಆಗಿ ಸಿಕ್ಕ ಪತಿಗೆ ಪತ್ನಿಯಿಂದ ಗೂಸಾ

Public TV
2 Min Read

ಲಕ್ನೋ: ಗರ್ಲ್ ಫ್ರೆಂಡ್ ಜೊತೆಗೆ ಶಾಪಿಂಗ್ ಮಾಡುತ್ತಿದ್ದ ಪತಿಯನ್ನು ರೆಡ್ ಹ್ಯಾಂಡ್ ಆಗಿ ನೋಡಿದ ಪತ್ನಿ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಗಾಜಿಯಾಬಾದ್ ಮಾರುಕಟ್ಟೆಯಲ್ಲಿ (Ghaziabad market) ನಡೆದಿದೆ.

ಸದ್ಯ ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಮಹಿಳೆ ತನ್ನ ಕೆಲವು ಸ್ನೇಹಿತೆಯರ ಜೊತೆ ಸೇರಿ ಗಂಡನ ಕಾಲರ್ ಹಿಡಿದು ಸಾರ್ವಜನಿಕವಾಗಿ ಥಳಿಸಿದ್ದಾಳೆ. ಈ ವೇಳೆ ವ್ಯಕ್ತಿಯನ್ನು ರಕ್ಷಿಸಲು ಪ್ರಯತ್ನಿಸಿದ ಗರ್ಲ್ ಫ್ರೆಂಡ್ ಮೇಲೂ ಮಹಿಳೆ ಹಲ್ಲೆ ನಡೆಸಿದ್ದಾಳೆ. ಇದನ್ನೂ ಓದಿ: ಮಣಿಪಾಲ ಆಸ್ಪತ್ರೆಯಲ್ಲಿ ಹೊಂದಾಣಿಕೆಯಾಗದ ಬ್ಲಡ್ ಗ್ರೂಪ್‍ನ ಕಿಡ್ನಿ ಕಸಿ ಯಶಸ್ವಿ

ಈ ವೇಳೆ ಅಂಗಡಿಯ ಮಾಲೀಕರೊಬ್ಬರು ಈ ವಿಚಾರವನ್ನು ಹೊರಗಡೆ ಇಟ್ಟುಕೊಳ್ಳಿ, ಹೊರಗೆ ಹೋಗಿ ಎಂದು ಹೇಳುತ್ತಿರುವುದನ್ನು ವೀಡಿಯೋದಲ್ಲಿ ಕೇಳಿಸಿಕೊಳ್ಳಬಹುದಾಗಿದೆ. ಇದೀಗ ಈ ಸಂಬಂಧ ಮಹಿಳೆ ತನ್ನ ಪತಿ ವಿರುದ್ಧ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪತಿಯೊಂದಿಗೆ ಜಗಳವಾದ ನಂತರ ಮಹಿಳೆ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದಳು. ಕರ್ವಾ ಚೌತ್‍ಗಾಗಿ (Karwa Chauth) ಶಾಪಿಂಗ್ ಮಾಡಲು ತನ್ನ ತಾಯಿಯೊಂದಿಗೆ ಬಂದಿದ್ದಳು. ಈ ವೇಳೆ ತನ್ನ ಪತಿ ಮತ್ತೊಬ್ಬಳೊಂದಿಗೆ ಓಡಾಡುತ್ತಿರುವುದನ್ನು ನೋಡಿರುವುದಾಗಿ ಮಹಿಳೆ ತಿಳಿಸಿದ್ದಾಳೆ. ಇದನ್ನೂ ಓದಿ: ಮುರುಘಾ ಶ್ರೀಗೆ ಮತ್ತೆ ಸಂಕಷ್ಟ – ಮೈಸೂರಿನಲ್ಲಿ ಮತ್ತೊಂದು FIR ದಾಖಲು

ಕರ್ವಾ ಚೌತ್ ಹಿಂದೂ ಹಬ್ಬವಾಗಿದ್ದು, ಈ ಹಬ್ಬವನ್ನು ದೇಶದಲ್ಲಿ ಹೆಚ್ಚಾಗಿ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಆಚರಿಸಲಾಗುತ್ತದೆ. ಈ ಹಬ್ಬದ ದಿನ ವಿವಾಹಿತ ಮಹಿಳೆಯರು ಉಪವಾಸ ಮಾಡುತ್ತಾರೆ ಮತ್ತು ತಮ್ಮ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಕರ್ವಾ ಚೌತ್ ಅನ್ನು ಕೃಷ್ಣ ಪಕ್ಷದ ನಾಲ್ಕನೇ ದಿನ ಅಥವಾ ಕಾರ್ತಿಕ್ ತಿಂಗಳ ಹಿಂದೂ ಕ್ಯಾಲೆಂಡರ್ ತಿಂಗಳಿನ ಕರಾಳ ಹದಿನೈದು ದಿನದಂದು ಆಚರಿಸಲಾಗುತ್ತದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *