ಹಳೆ ವೈಷಮ್ಯಕ್ಕೆ ಚಾಕುವಿನಿಂದ 30 ಬಾರಿ ಇರಿದು ಹತ್ಯೆ – ಬಳಿಕ ಪೊಲೀಸರಿಗೆ ಶರಣಾದ ಆರೋಪಿಗಳು

Public TV
1 Min Read

– ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಯಚೂರು: ಹಳೆ ವೈಷಮ್ಯಕ್ಕೆ ನಡುರಸ್ತೆಯಲ್ಲೇ ಚಾಕುವಿನಿಂದ 30 ಬಾರಿ ಇರಿದು ವ್ಯಕ್ತಿಯೋರ್ವನನ್ನು ಹತ್ಯೆಗೈದಿರುವ ಭೀಕರ ಘಟನೆ ನಗರದ ಬಂಗೀಕುಂಟದಲ್ಲಿ ನಡೆದಿದೆ.

ಮೃತ ವ್ಯಕ್ತಿ ಸೈಯದ್ ಖದೀರ್ (40). ಆರೋಪಿಗಳನ್ನು ಅನ್ವರ್ ಹಾಗೂ ತಿಮ್ಮಪ್ಪ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಅಪ್ಪು ಮಾಮ ಎಲ್ಲೇ ಇದ್ರೂ ನಗು ನಗುತ್ತಾ ಚೆನ್ನಾಗಿರು: ಶ್ರೀಮುರಳಿ

ಶನಿವಾರ ಸೈಯದ್ ಖದೀರ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ವಾಹನಕ್ಕೆ ಅಡ್ಡಗಟ್ಟಿ ಚಾಕುವಿನಿಂದ 30 ಬಾರಿ ಇರಿದು ಹತ್ಯೆಗೈದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸೈಯದ್ ಖದೀರ್‌ನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕೊಲೆಯ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೊಲೆ ಬಳಿಕ ಆರೋಪಿಗಳು ನೇರವಾಗಿ ನೇತಾಜಿ ನಗರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಸದ್ಯ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಇದನ್ನೂ ಓದಿ: ಯಶವಂತಪುರ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ – ಕೆಲವು ರೈಲುಗಳ ಸಂಚಾರ ರದ್ದು, ಟರ್ಮಿನಲ್ & ಮಾರ್ಗ ಬದಲಾವಣೆ

 

Share This Article