ಫೋಟೋ ತೆಗೆದುಕೊಳ್ಳುವಾಗ ಜಾರಿ ಬಿದ್ದು ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
1 Min Read

ಮಂಡ್ಯ: ಫೋಟೋ ತೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ (Cauvery Water) ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.

ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ( 36) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ. ಭಾನುವಾರ ಸಂಜೆ ಮಹೇಶ್‌ ಸ್ನೇಹಿತರೊಂದಿಗೆ ಕೆಆರ್‌ಎಸ್ ಭಾಗಕ್ಕೆ ಪಿಕ್ನಿಕ್‌ ಬಂದಿದ್ದರು. ಇದನ್ನೂ ಓದಿ: ರಶ್ಮಿಕಾ ಹೇಳಿದ್ರೆ ಅದು ನಿಜ ಆಗೋಲ್ಲ ನಿಧಿ ಸುಬ್ಬಯ್ಯ ಕೌಂಟರ್

ಸರ್ವಧರ್ಮ ಆಶ್ರಮದ ಫೋಟೋ ತೆಗೆಸಿಕೊಳ್ಳಲು ಹೋದಾಗ ಆಯತಪ್ಪಿ ಕಾವೇರಿ ನದಿಗೆ ಬಿದ್ದಿದ್ದಾರೆ. ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಮಹೇಶ್‌ ಕೊಚ್ಚಿ ಹೋಗಿದ್ದಾರೆ. ಇದನ್ನೂ ಓದಿ: ರಾರಾಯಗಢ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ – ಹೈ ಅಲರ್ಟ್‌ ಘೋಷಣೆ

ಕೊಚ್ಚಿ ಹೋದ ಮಹೇಶ್‌ ಪತ್ತೆಗಾಗಿ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸುತ್ತಿದೆ. ಕೆಆರ್‌ಎಸ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article