ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ

Public TV
1 Min Read

ಚಿಕ್ಕಬಳ್ಳಾಪುರ: ಮಾಂಡೌಸ್ ಚಂಡಮಾರುತದ(Mandous Cyclone) ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ(Chikkaballapura) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜು ರಜೆ(Holiday) ಘೋಷಣೆ ಮಾಡಿ ಆದೇಶ‌ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರೀ ಮಳೆಯ ಎಚ್ಚರಿಕೆ

ನಿರಂತರ ಮಳೆಯ‌(Rain) ಜೊತೆ ಅತಿಯಾದ ಚಳಿ ಶೀತಗಾಳಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 2 ಬಲಿ ಪಡೆದು, ಡ್ರೋನ್ ಕ್ಯಾಮೆರಾಕ್ಕೂ ಚಳ್ಳೆಹಣ್ಣು ತಿನ್ನಿಸಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಭೈರ ಕೊನೆಗೂ ಸಿಕ್ಕಿಬಿದ್ದ

ಮುಂದಿನ ದಿನಗಳಲ್ಲಿ ರಜೆಯ ದಿನ ಶಾಲೆ ನಡೆಸುವ ಮೂಲಕ ಈ ರಜೆಯ ದಿನ ಸರಿದೂಗಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *