8 ಲಕ್ಷ ಲಂಚಕ್ಕೆ ಬೇಡಿಕೆ – ಮಂಡ್ಯ ಕೃಷಿ ಅಧಿಕಾರಿಗಳಿಂದ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ

Public TV
2 Min Read

– ಇದು ನಕಲಿ ಪತ್ರವೆಂದ ಕೃಷಿ ಸಚಿವ

ಬೆಂಗಳೂರು/ಮಂಡ್ಯ: ಕೃಷಿ ಮಂತ್ರಿ ಸಚಿವ ಚಲುವರಾಯಸ್ವಾಮಿ (N. Chaluvaraya Swamy) ವಿರುದ್ಧ ಲಂಚದ (Corruption) ಬೇಡಿಕೆಯ ಆರೋಪ ಕೇಳಿಬಂದಿದೆ. ಕೃಷಿ ಸಚಿವರು ಲಂಚಕ್ಕೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಕೃಷಿ ಇಲಾಖೆಯ (Agriculture Department Mandya) ಐವರು ಅಧಿಕಾರಿಗಳು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರಿಗೆ ನೇರವಾಗಿ ಪತ್ರ ಬರೆದಿದ್ದಾರೆ.

ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ತಲಾ 6 ರಿಂದ 8 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಜಂಟಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆ. ಈ ಟಾರ್ಚರ್ ತಡೆಯಲು ಸಾಧ್ಯವಾಗುತ್ತಿಲ್ಲ. ತಾವು ಕ್ರಮ ತೆಗೆದುಕೊಳ್ಳದಿದ್ದಲ್ಲಿ ಕುಟುಂಬದ ಜೊತೆ ನಾವು ವಿಷ ಕುಡಿಯುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.  ಇದನ್ನೂ ಓದಿ: ರೈತರ ದ್ರೋಹಿ ಯಾರಾದ್ರೂ ಇದ್ರೆ ಅದು ಸಿದ್ದರಾಮಯ್ಯ – ಈಶ್ವರಪ್ಪ ಕಿಡಿ

ಈ ಪತ್ರಕ್ಕೆ ಸ್ಪಂದಿಸಿದ ರಾಜ್ಯಪಾಲರು ಕ್ರಮ ಕೈಗೊಳ್ಳುವಂತೆ ಸೂಚಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ದೂರಿನ ಈ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮವಹಿಸಿ ಎಂದು ನಿರ್ದೇಶನ ನೀಡಿದ್ದಾರೆ. ಈ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‍ಪಿ ಕೃಷಿ ಇಲಾಖೆಗೆ ಭೇಟಿ ನೀಡಿ ಜಂಟಿ ನಿರ್ದೇಶಕರಿಂದ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದರು. ಇದು ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಇದು ವಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗಿ ಸಿಕ್ಕಿದೆ.

ಬಿಜೆಪಿ ಟ್ವೀಟ್ ಮಾಡಿ, ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹ ಸಿದ್ದರಾಮಯ್ಯನವರೇ (Siddaramaiah) ನಿಮ್ಮದೇ ಸಂಪುಟದ ಕೃಷಿ ಮಂತ್ರಿ ಚಲುವರಾಯಸ್ವಾಮಿ ಭ್ರಷ್ಟಾಚಾರ (Corruption) ಮಾಡಿ ಸಿಕ್ಕಿಬಿದ್ದಿದ್ದಾರೆ. ಶಾಸಕರ ಪತ್ರ ನಕಲು ಎಂದಿದ್ದ ನೀವು ಈಗ ನಿಮ್ಮ ಸಚಿವರ ಕರ್ಮಕಾಂಡ ಬಯಲು ಮಾಡುವ ಪತ್ರವೂ ನಕಲು ಎನ್ನುತ್ತಿರೋ ಹೇಗೆ? ನೀವು ಈ ಕೂಡಲೇ ಭ್ರಷ್ಟ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಅಥವಾ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಆಗ್ರಹಿಸಿದೆ.

ತಮ್ಮ ವಿರುದ್ಧ ಆರೋಪ ಕೇಳಿಬಂದ ಕೂಡಲೇ ಮಂಡ್ಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಮತ್ತು ಎಸ್‍ಪಿ ಜೊತೆ ಸಚಿವ ಚಲುವರಾಯಸ್ವಾಮಿ ಗೌಪ್ಯ ಸಭೆ ನಡೆಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕರನ್ನು ಹೊರಕ್ಕೆ ಕರೆದು ವೇದಿಕೆ ಹಿಂಭಾಗ ಗುಪ್ತ ಸಭೆ ನಡೆಸಿದರು.

ಈ ಸಭೆಯ ವಿಡಿಯೋ ಮಾಡದಂತೆ ಕೃಷಿ ಮಂತ್ರಿಯ ಬೆಂಬಲಿಗರು ತಾಕೀತು ಮಾಡಿದರು. ಗೌಪ್ಯಸಭೆ ಬಳಿಕ ಮಾತನಾಡಿದ ಚಲುವರಾಯಸ್ವಾಮಿ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿ ರಾಜ್ಯಪಾಲರಿಗೆ ಬರೆದ ಪತ್ರವೇ ನಕಲಿ ಎಂದರು. ತಮ್ಮನ್ನು ಕೆಲವರು ಟಾರ್ಗೆಟ್ ಮಾಡಿದ್ದು, ಬೇಕಂತಲೇ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಅವರು ನನ್ನನ್ನು ಟಾರ್ಗೆಟ್ ಮಾಡಿದಷ್ಟು ಇನ್ನಷ್ಟು ಪ್ರಕಾಶಮಾನವಾಗಿ ಬೆಳಗುತ್ತೇನೆ. ಈ ಬಗ್ಗೆ ತನಿಖೆ ಮಾಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್