ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಕಾಮುಕನಿಗೆ 20 ವರ್ಷ ಕಠಿಣ ಜೈಲು

Public TV
1 Min Read

ಮಂಡ್ಯ: ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾಗುವಂತೆ ಮಾಡಿದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ (POCSO Speical Court) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಳಿಗುಂದ ಗ್ರಾಮದ ಯಶ್ವಂತ್ (33) ಶಿಕ್ಷೆಗೊಳಗಾದ ಅಪರಾಧಿ. ಈತ 2019ರಲ್ಲಿ 17 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಪರಿಣಾಮ ನೊಂದ ಬಾಲಕಿ ಗರ್ಭವತಿಯಾಗಿದ್ದಳು. ಇದನ್ನೂ ಓದಿ: ಶಾರ್ಟ್‌ಕಟ್‌ ರಾಜಕೀಯಕ್ಕೆ ಜನರು ಶಾರ್ಟ್ ಸರ್ಕ್ಯೂಟ್ ನೀಡಿದ್ದಾರೆ – ಇದು ವಿಕಾಸದ ಗೆಲುವು ಎಂದ ಮೋದಿ 

ಈತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ಅಂದಿನ ಬೆಳ್ಳೂರು ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಎಂ. ನಂಜಪ್ಪ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ದಿಲೀಪ್ ಕುಮಾರ್ ಅವರಿದ್ದ ಪೀಠ ಯಶ್ವಂತ್‌ನನ್ನು ಅಪರಾಧಿ ಎಂದು ತೀರ್ಮಾನಿಸಿತು. ಇದನ್ನೂ ಓದಿ: ಸಮಂತಾಗೆ ಡಿವೋರ್ಸ್ ಕೊಡುವಾಗ ಸಾವಿರ ಬಾರಿ ಯೋಚಿಸಿದ್ದೇನೆ: ನಾಗಚೈತನ್ಯ

ಈ ಹಿನ್ನೆಲೆ ಯಶ್ವಂತ್‌ಗೆ 6 ತಿಂಗಳ ಕಠಿಣ ಸಜೆ ಮತ್ತು 2,500 ರೂ. ದಂಡ ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷಗಳ ಕಠಿಣ ಸಜೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿತು. ಅಲ್ಲದೇ ನೊಂದ ಬಾಲಕಿಗೆ 50,000 ರೂ. ಪರಿಹಾರ ನೀಡುವಂತೆ ಆದೇಶಿಸಿತು. ಇದನ್ನೂ ಓದಿ: 20 ಸಾವಿರಕ್ಕೆ ಮಾರಾಟ ಮತ್ತೆ 50 ಸಾವಿರಕ್ಕೆ ಖರೀದಿ – ಈಗ 1.48 ಲಕ್ಷಕ್ಕೆ 8 ತಿಂಗಳ ಟಗರು ಸೇಲ್‌!

Share This Article