ಮಂಗಳೂರು | ಕುಡುಪುವಿನಲ್ಲಿ ಅಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ವಜಾ

Public TV
2 Min Read

ಬೆಂಗಳೂರು: ಮಂಗಳೂರಿನ (Mangaluru) ಕುಡುಪುವಿನಲ್ಲಿ ಕೇರಳದ ಆಶ್ರಫ್ ಕೊಲೆ ಪ್ರಕರಣ (Kudupu Ashraf Murder Case) ಸಂಬಂಧ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ (High Court) ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಪೈಕಿ ಪ್ರಕರಣದ ಆರೋಪಿಗಳಾದ ಅನಿಲ್ ಕುಮಾರ್, ಸಾಯಿದೀಪ್, ಅನಿಲ್ ಕುಮಾರ್, ಯತಿರಾಜ್, ಮನೀಶ್ ಶೆಟ್ಟಿ, ಪ್ರದೀಪ್, ವಿವಿಯನ್ ಆಲ್ವರಿಸ್, ಶ್ರೀದತ್ತ, ಧನುಷ್, ಕಿಶೋರ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದನ್ನೂ ಓದಿ: ಕುಡುಪು ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿ ಕೊಲೆ ಕೇಸ್ – 20 ಆರೋಪಿಗಳು ಬಂಧನ

ಪ್ರಕರಣ ಏನು?
ಏ.27ರ ಭಾನುವಾರ ಸಂಜೆ 5:30ರ ಸುಮಾರಿಗೆ ಮಂಗಳೂರಿನ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದರು. ಮೃತದೇಹದ ಮರಣೋತ್ತರ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತನ ಬೆನ್ನಿಗೆ ಬಲವಾದ ಹೊಡೆತ ಬಿದ್ದಿದೆ. ಗಂಭೀರ ಗಾಯಗೊಂಡ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿದೆ. ಇದನ್ನೂ ಓದಿ: ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು – ಧನ್ಯವಾದ ತಿಳಿಸಿದ ಶುಭಾಂಶು ಶುಕ್ಲಾ

ಅಪರಿಚಿತ ಮೃತದೇಹ ಅನುಮಾನಾಸ್ಪದವಾಗಿ ಸಿಕ್ಕಿದ ಹಿನ್ನಲೆಯಲ್ಲಿ ಬಿಸಿ ಬಿಸಿ ಚರ್ಚೆಗಳು ಅದಾಗಲೇ ಆರಂಭವಾಗಿತ್ತು. ಹಿಂದೂ ಯುವಕರು ಮುಸ್ಲಿಂ ಯುವಕನನ್ನು ಗುಂಪು ಹತ್ಯೆ ನಡೆಸಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಅಂತಾ ಸಿಪಿಐಎಂ, ಎಸ್‌ಡಿಪಿಐ ಪಕ್ಷಗಳು ಆರೋಪ ಮಾಡಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ನೈಜ ವಿಚಾರ ಗೊತ್ತಾಗಿದೆ. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಿ: ಡಿಕೆಶಿ

ಕೊಲೆಯಾಗಿದ್ದು ಯಾಕೆ?
ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ಸಂದರ್ಭ ವಿಚಾರವೊಂದಕ್ಕೆ ಮೃತ ವ್ಯಕ್ತಿಗೆ ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಈ ಸಂದರ್ಭ ಸಚಿನ್ ಆತನಿಗೆ ಥಳಿಸಿದ್ದು, ಬಳಿಕ ಅಲ್ಲಿದ್ದ 25ರಿಂದ 30 ಮಂದಿಯ ಗುಂಪು ಅಪರಿಚಿತ ವ್ಯಕ್ತಿಗೆ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳ ಸೆರೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು 19 ಮಂದಿ ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, ಕಲಂ: 103(2), 115(2), 189(2), 190, 191(1), 191(3), 240 ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಪೊಲೀಸರು 20 ಮಂದಿಯನ್ನು ಬಂಧಿಸಿದ್ದರು. ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

Share This Article