ಮಂಗಳೂರು ಬಾಂಬ್ ಸ್ಫೋಟದ ತನಿಖೆ NIA ಹೆಗಲಿಗೆ : ನಳಿನ್ ಕುಮಾರ್ ಕಟೀಲ್

Public TV
3 Min Read

ಮಂಗಳೂರು: ಮಂಗಳೂರಿನಲ್ಲಿ (Mangaluru) ಆಟೋರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣವನ್ನು ಕೇಂದ್ರ ಸರ್ಕಾರದ (Government Of India) ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ (NIA) ತನಿಖೆ ನಡೆಸಲಿದೆ. ಇದರ ಹಿಂದಿರುವ ಮೂಲಭೂತವಾದಿಗಳ ಜಾಡನ್ನು ಪತ್ತೆಹಚ್ಚಲು ಎನ್‌ಐಎ ನೆರವಾಗಲಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (NalinKumar Kateel) ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಟೀಲ್ ಅವರು, ಮೂಲಭೂತವಾದಿಗಳ ಇಂತಹ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ನೀಡುವವರಿಗೂ ಹೆಡೆಮುರಿ ಕಟ್ಟಲು ನಮ್ಮ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಜೆಪಿಯಿಂದ 7 ಬಂಡಾಯ ಶಾಸಕರು ಅಮಾನತು

ಟ್ವೀಟ್‌ನಲ್ಲಿ ಏನಿದೆ?
ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ. ಮೂಲಭೂತವಾದಿಗಳ ಇಂತಹ ಭಯೋತ್ಪಾದಕ ಕೃತ್ಯಕ್ಕೆ ಬೆಂಬಲ ಅಥವಾ ನೆರವು ನೀಡುವವರಿಗೂ ಹೆಡೆಮುರಿ ಕಟ್ಟಲು ನಮ್ಮ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ. ಇದನ್ನೂ ಓದಿ: ಬೇರೆಲ್ಲೋ ಸ್ಫೋಟವಾಗಬೇಕಿದ್ದ ಕುಕ್ಕರ್ ಬಾಂಬ್ ಹಂಪ್ಸ್ ಕಾರಣದಿಂದ ಆಟೋದಲ್ಲೇ ಬ್ಲಾಸ್ಟ್!

ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ ಬಾಲ ಬಿಚ್ಚಲು ಕೆಲವರು ಹೊರಟಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಸಮರದಲ್ಲಿ ನಾಗರಿಕರ ಸಹಕಾರ ಮುಖ್ಯ. ಕರ್ನಾಟಕದಲ್ಲಿ ನಮ್ಮ ಪೊಲೀಸ್ ಇಲಾಖೆ ಮಂಗಳೂರಿನ ಸ್ಫೋಟದ ಮೂಲ ಪತ್ತೆಹಚ್ಚುವಲ್ಲಿ ನಿರತವಾಗಿದ್ದು, ಕೇಂದ್ರದಿಂದ ಅಗತ್ಯ ನೆರವು ನೀಡಲಾಗಿದೆ.

ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು. ಕರ್ನಾಟಕದಲ್ಲಿ ಭಯೋತ್ಪಾದಕ ಕೃತ್ಯ ಮಾಡುವ ಮೂಲಕ ರಾಜ್ಯಕ್ಕೆ ಕೆಟ್ಟ ಹೆಸರು ತರುವ ಮತಾಂಧರ ಪ್ರಯತ್ನ ಜಾರಿಯಾಗಲು ಬಿಡುವುದಿಲ್ಲ.

ಕೇಂದ್ರ ಸರ್ಕಾರದ (Government Of India) ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ (NIA) ಮಂಗಳೂರಿನ ಬಾಂಬ್ ಸ್ಫೋಟದ (Mangaluru Bomb Blast) ತನಿಖೆ ನಡೆಸಲಿದ್ದು, ಇದರ ಹಿಂದಿರುವ ಮೂಲಭೂತವಾದಿಗಳ ಜಾಡನ್ನು ಪತ್ತೆಹಚ್ಚಲು ನೆರವಾಗಲಿದೆ. ಬಾಂಬ್ ಸ್ಫೋಟದ ಹಿಂದೆ ಅಂತರರಾಜ್ಯ ದೇಶದ್ರೋಹಿಗಳ ಕೈವಾಡ ಪತ್ತೆ ಹಚ್ಚಲು ಎನ್‌ಐಎ ಕಾರ್ಯತತ್ಪರವಾಗಿದೆ. ನಮ್ಮ ಉನ್ನತ ಪೊಲೀಸ್ ಅಧಿಕಾರಿಗಳು ಸಹಕರಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *