ಮಂಗಳೂರಲ್ಲಿ ಮೀನು ವ್ಯಾಪಾರಿಯ ಹತ್ಯೆಗೆ ಯತ್ನ – ಹಿಂದೂ ಮಹಿಳೆಯ ಸಮಯಪ್ರಜ್ಞೆಯಿಂದ ಬಚಾವ್

Public TV
1 Min Read

ಮಂಗಳೂರು: ಹಿಂದೂ ಕಾರ್ಯಕರ್ತ (Hindu Activist) ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ, ಮೀನು ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿದ ಘಟನೆ ಕುಂಟಿಕಾನ ಬಳಿ ನಡೆದಿದೆ.

ಉಳ್ಳಾಲ ನಿವಾಸಿ ಲುಕ್ಮಾನ್ ಹಲ್ಲೆಗೊಳಗಾದ ಮೀನು ವ್ಯಾಪಾರಿ ಎಂದು ತಿಳಿದು ಬಂದಿದೆ. ಅವರು ವ್ಯಕ್ತಿಯೊಬ್ಬರಿಗೆ ಮೀನು ನೀಡಲು ರಸ್ತೆಯಲ್ಲಿ ಕಾಯುತ್ತಿದ್ದರು. ಈ ವೇಳೆ ಇನ್ನೊವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಟ್ಟಾಡಿಸಿ, ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ಹಿಂದೂ ಮಹಿಳೆಯೊಬ್ಬಳು ನೋಡಿ ಭಯದಿಂದ ಬೊಬ್ಬೆ ಹಾಕಿದ್ದು, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮೂವರಿಗೆ ಚಾಕು ಇರಿತ

ಮಹಿಳೆಯ ಸಮಯಪ್ರಜ್ಞೆಯಿಂದ ಅವರು ಸಾವಿನಿಂದ ಬಚಾವ್ ಆಗಿದ್ದು, ಅವರನ್ನು  ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ ಬಜ್ಪೆಯ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಬರ್ಬರ ಹತ್ಯೆ ನಡೆದಿತ್ತು. ಸುರತ್ಕಲ್‍ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ಸುಮಾರು 10 ಮಂದಿ ಸೇರಿ ತಲವಾರಿನಿಂದ ಹತ್ಯೆ ಮಾಡಿದ್ದರು. ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಮಂಗಳೂರಿನಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದರ ನಡುವೆಯೂ ದುಷ್ಕರ್ಮಿಗಳು ಮೂವರಿಗೆ ಚಾಕು ಇರಿದು ಅಟ್ಟಹಾಸ ಮೆರೆದಿದ್ದಾರೆ. ಇದನ್ನೂ ಓದಿ: ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ: ವಿಜಯೇಂದ್ರ ಘೋಷಣೆ

Share This Article