Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

Public TV
1 Min Read

ಮಂಗಳೂರು: ಮೊಂಟೆಪದವು (Montepadavu) ಕೋಡಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು (Landslide) ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದ ಮಹಿಳೆ ಎರಡೂ ಕಾಲುಗಳು ಸ್ವಾಧಿನ ಕಳೆದುಕೊಂಡಿದ್ದಾರೆ. ಇದರಿಂದ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಎರಡೂ ಕಾಲನ್ನು ಕತ್ತರಿಸಿ ತೆಗೆದಿದ್ದಾರೆ.

ಮೇ 30ರ ಬೆಳಗಿನ ಜಾವ ಭಾರೀ ಮಳೆಯಿಂದ (Rain) ಮೊಂಟೆಪದವಿನಲ್ಲಿ ಮನೆ ಮೇಲೆ ಗುಡ್ಡ ಕುಸಿದಿತ್ತು. ಅವಶೇಷಗಳ ಅಡಿ ಸಿಲುಕಿದ್ದ ಮಹಿಳೆ ಅಶ್ವಿನಿ, ಅವರ ಇಬ್ಬರು ಮಕ್ಕಳನ್ನು ಬಿಗಿದಪ್ಪಿ ಕಾಪಾಡಲು ಯತ್ನಿಸಿದ್ದರು. ಆದರೆ ಒಂದು ಮಗು ಅಲ್ಲಿಯೇ ಸಾವನ್ನಪ್ಪಿತ್ತು. ಇನ್ನೊಂದು ಮಗು ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದೊಯ್ಯವ ಮಾರ್ಗ ಮಧ್ಯೆ ಸಾವನ್ನಪ್ಪಿತ್ತು. ಗಾಯಗೊಂಡಿದ್ದ ಅಶ್ವಿನಿಯವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

ಮಹಿಳೆಯ ಸಂಪೂರ್ಣ ಸ್ವಾಧೀನ ಕಳೆದುಕೊಂಡಿರುವ ಕಾಲುಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಕತ್ತರಿಸಿದ್ದಾರೆ. ಒಂದು ಕಾಲಿನ ಪಾದದ ಭಾಗದಿಂದ ಕತ್ತರಿಸಲಾಗಿದೆ. ಮತ್ತೊಂದು ಪೂರ್ತಿ ಕಾಲು ಕತ್ತರಿಸಿದ್ದಾರೆ. 24 ಗಂಟೆಗಳ ಕಾಲ ವೈದ್ಯರು ಅವರ ಮೇಲೆ ನಿಗ ಇಟ್ಟಿದ್ದಾರೆ.

ಘಟನೆಯಲ್ಲಿ ಮೃತಪಟ್ಟ ಮೂವರನ್ನು ಮನೆ ಕುಸಿದ ಪಕ್ಕದಲ್ಲೇ ಅಂತ್ಯಕ್ರಿಯೆ ಮಾಡಿದ್ದಾರೆ. ಇಬ್ಬರು ಮಕ್ಕಳಾದ ಆರ್ಯನ್ ಮತ್ತು ಆರುಷ್ ಮೃತದೇಹವನ್ನು ಮಣ್ಣಿನಲ್ಲಿ ಹೂಳಲಾಗಿದೆ. ಪಕ್ಕದಲ್ಲೇ ಅಜ್ಜಿ ಪ್ರೇಮಾ ಅವರ ಶವಕ್ಕೆ ಅಗ್ನಿ ಸ್ಪರ್ಶ ಮಾಡಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

Share This Article