ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ಮತಾಂತರ ಯತ್ನವೇ ಕಾರಣ- ಪೊಲೀಸರ ತನಿಖೆಯಿಂದ ಬಯಲು

Public TV
1 Min Read

ಮಂಗಳೂರು: ಮಾರ್ಗನ್ಸ್ ಗೇಟ್‍ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇದಕ್ಕೆ ಮತಾಂತರ ಯತ್ನವೇ ಕಾರಣ ಎಂದು ಮಂಗಳೂರು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮಂಗಳೂರಿನ ಮಾರ್ಗನ್ಸ್ ಗೇಟ್‍ನಲ್ಲಿ ಒಂದೇ ಕುಟುಂಬದ ನಾಗೇಶ್ ಶೇರಿಗುಪ್ಪಿ(30), ಪತ್ನಿ ವಿಜಯಲಕ್ಷ್ಮಿ(26), ಮಕ್ಕಳಾದ ಸಪ್ನಾ(8) ಮತ್ತು ಸಮರ್ಥ್(4) ಆತ್ಮಹತ್ಯೆ ಮಾಡಿಕೊಂಡಿದ್ದರು. ಕುಟುಂಬದ ಸಾವಿಗೆ ನಿಜವಾದ ಕಾರಣ ತಿಳಿಯಲು ಮಂಗಳೂರು ಪೊಲೀಸರು ತನಿಖೆ ನಡೆಸಿದ್ದಾರೆ. ಕುಟುಂಬದವರ ಸಾವಿಗೆ ಮತಾಂತರ ಯತ್ನವೇ ಕಾರಣ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಮತದಾನ ಮಾಡಿದ ಸದಸ್ಯರಿಂದ ಮತ ಪತ್ರ ಬಹಿರಂಗ- ಚುನಾವಣಾಧಿಕಾರಿಗೆ ದೂರು

ಕಾರಣವೇನು?
ವಿಜಯಲಕ್ಷ್ಮಿ ಎಂಬಾಕೆ ಮುಸ್ಲಿಂ ಮಹಿಳೆ ನೂರ್ ಜಹಾನ್ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ನೂರ್ ಜಹಾನ್ ಮಂಗಳೂರಿನಲ್ಲಿ ಮದುವೆ ಬ್ರೋಕರ್ ಆಗಿದ್ದು, ವಿಜಯಲಕ್ಷ್ಮಿ ಮತ್ತು ಆಕೆಯ ಪತಿ ನಾಗೇಶ್ ನಡುವಿನ ಜಗಳವನ್ನು ಅಡ್ವಾಂಟೇಜ್ ಆಗಿ ತೆಗೆದುಕೊಂಡಿದ್ದಾರೆ. ನೀನು ನಿನ್ನ ಗಂಡನಿಗೆ ವಿಚ್ಛೇದನ ಕೊಟ್ಟು ನಮ್ಮ ಧರ್ಮಕ್ಕೆ ಮತಾಂತರವಾಗು, ನಂತರ ನಮ್ಮ ಧರ್ಮದಲ್ಲೇ ಒಂದು ಹುಡುಗನನ್ನು ನೋಡಿ ಮದುವೆ ಮಾಡಿಸುತ್ತೇನೆ ಎಂದು ಪುಸಲಾಯಿಸಿದ್ದಾರೆ.

ಪ್ರತಿದಿನ ಕುಡಿದು ಬರುತ್ತಿದ್ದ ಪತಿ ಜೊತೆಗಿನ ಜಗಳದಿಂದ ರೋಸಿ ಹೋಗಿದ್ದ ವಿಜಯಲಕ್ಷ್ಮೀ, ನೂರ್ ಜಹಾನ್ ಮಾತಿಗೆ ಒಪ್ಪುಗೆ ನೀಡಿದ್ದರು. ವಿಜಯಲಕ್ಷ್ಮಿಗೆ ಗಂಡು ಹುಡುಕುವ ಕೆಲಸವನ್ನು ನೂರ್ ಜಹಾನ್ ಆರಂಭಿಸಿದ್ದರು. ನಾಗೇಶ್‍ಗೆ ಈ ವಿಚಾರ ತಿಳಿದಿದ್ದು, ವಿಜಯಲಕ್ಷ್ಮಿ ಜೊತೆಗೆ ಗಲಾಟೆ ಮಾಡಿದ್ದಾನೆ. ಈ ವೇಳೆ ಮಕ್ಕಳು ಮತ್ತು ಪತ್ನಿಯನ್ನು ಕೊಂದು ನಾಗೇಶ್ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ: ಮುಂಬೈನಲ್ಲಿ 144 ಸೆಕ್ಷನ್ ಜಾರಿ- ರ‍್ಯಾಲಿ, ಮೆರವಣಿಗೆಗೆ ನಿಷೇಧ

ಘಟನೆಗೆ ಸಂಬಂಧಿಸಿದಂತೆ ನೂರ್ ಜಹಾನ್ ವಿರುದ್ಧ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *