ಮಣಿಪುರದಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು – ಮತ್ತೆ ಇಂಟರ್‌ನೆಟ್ ಸ್ಥಗಿತ

Public TV
1 Min Read

ಇಂಫಾಲ್: ಅಪಹರಣಕ್ಕೊಳಗಾಗಿದ್ದ ಇಬ್ಬರು ವಿದ್ಯಾರ್ಥಿಗಳ (Students) ಬರ್ಬರ ಹತ್ಯೆ ಬಳಿಕ ಮಣಿಪುರದಲ್ಲಿ (Manipur) ಪ್ರತಿಭಟನೆಗಳು ಭುಗಿಲೆದ್ದಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತೆ ಮೊಬೈಲ್ ನೆಟ್‍ವರ್ಕ್ ಹಾಗೂ ಇಂಟರ್‌ನೆಟ್ (Internet) ಸೇವೆಗಳನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಇಬ್ಬರು ವಿದ್ಯಾರ್ಥಿಗಳ ಶವದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರತಿಭಟನೆ ಶುರುವಾಗಿದೆ. ಹತ್ಯೆಯನ್ನು ಖಂಡಿಸಿ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಿದರು. ಬಳಿಕ ಅವರನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಘಟನೆಯಲ್ಲಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ – 30 ಮಂದಿಗೆ ಗಾಯ

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆ (ಸೆಪ್ಟೆಂಬರ್ 27) ರಜೆ ಘೋಷಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ತಪ್ಪು ಮಾಹಿತಿ, ಸುಳ್ಳು ವದಂತಿಗಳು ಮತ್ತು ಇತರ ಹಿಂಸಾತ್ಮಕ ವಿಚಾರಗಳ ಹರಡುವಿಕೆಯನ್ನು ತಡೆಯಲು ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಹಿನ್ನೆಲೆ ಸುಮಾರು ಐದು ತಿಂಗಳ ನಿಷೇಧದ ನಂತರ ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಇತ್ತೀಚೆಗೆ ಪುನಃಸ್ಥಾಪಿಸಲಾಗಿತ್ತು. ಇದೀಗ ಮತ್ತೆ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಸರ್ಕಾರ ಪುನಃ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಿದೆ. ಇದನ್ನೂ ಓದಿ: ಬೂದಿ ಮುಚ್ಚಿದ ಕೆಂಡದಂತಾದ ಮಣಿಪುರ – ಇಬ್ಬರು ವಿದ್ಯಾರ್ಥಿಗಳ ಶವದ ಫೋಟೋ ವೈರಲ್‌

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್