ಮಣಿಪುರ ಸಂಘರ್ಷ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿದ ಕಿಡಿಗೇಡಿಗಳು

Public TV
1 Min Read

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ (Manipur Violence) ಕಳೆದ 3 ತಿಂಗಳುಗಳಿಂದ ನಿರಂತರವಾಗಿ ನಡೆಯುತ್ತಲೇ ಇದ್ದು, ಗುರುವಾರ ಕಿಡಿಗೇಡಿಗಳು ಇಂಫಾಲದಲ್ಲಿ (Imphal) ಪೊಲೀಸ್ ಅಧಿಕಾರಿಯೊಬ್ಬರನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ನಡೆದಿದೆ.

ಗುರುವಾರ ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪು ಬಿಷ್ಣುಪುರ್ ಜಿಲ್ಲೆಯ ಮಣಿಪುರ ಸಶಸ್ತ್ರ ಪೊಲೀಸ್ ಎರಡನೇ ಬೆಟಾಲಿಯನ್‌ನ ಕೀರೆನ್‌ಫಾಬಿ ಪೊಲೀಸ್ ಔಟ್‌ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿದೆ. ಕೌಟ್ರುಕ್, ಹರಾಥೆಲ್ ಮತ್ತು ಸೆಂಜಮ್ ಚಿರಾಂಗ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

ಕಳೆದ 24 ಗಂಟೆಗಳಲ್ಲಿ ರಾಜ್ಯದ ಪರಿಸ್ಥಿತಿ ಇನ್ನೂ ಹದಗೆಟ್ಟಿದೆ. ವಿವಿಧ ಸ್ಥಳಗಳಲ್ಲಿ ಜನರ ಸಮೂಹ ಅಶಿಸ್ತಿನಿಂದ ವರ್ತಿಸಿ ಗುಂಡು ಹಾರಿಸುವ ಹಾಗೂ ಗುಂಪುಗೂಡುವುದು ಸಂಭವಿಸುತ್ತಲೇ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಣಿಪುರದ ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಒಟ್ಟು 129 ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಲ್ಲಂಘನೆಗೆ ಸಂಬಂಧಿಸಿದಂತೆ ಸುಮಾರು 1,047 ಜನರನ್ನು ಬಂಧಿಸಲಾಗಿದೆ. ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಪ್ರಾರಂಭವಾದ ಜನಾಂಗೀಯ ಘರ್ಷಣೆ ಕಳೆದ 3 ತಿಂಗಳಿನಿಂದ ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಇದನ್ನೂ ಓದಿ: ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್