ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡ್ತಾನೆ: ಹೆಚ್‌ಡಿಕೆ

Public TV
1 Min Read

ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ (Manjunath Swamy) ಶಿಕ್ಷೆ ಕೊಡುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumarswamy) ಭವಿಷ್ಯ ನುಡಿದಿದ್ದಾರೆ.

ಜೆಪಿ ನಗರ ನಿವಾಸದಲ್ಲಿ ಧರ್ಮಸ್ಥಳ ಕೇಸ್ ವಿಚಾರವಾಗಿ ಮಾತನಾಡಿದ ಅವರು, ಧರ್ಮಸ್ಥಳ ಕೇಸ್‌ನಲ್ಲಿ ಈ ಸರ್ಕಾರ ನಡೆದುಕೊಂಡು ರೀತಿಗೆ ನಿಜಕ್ಕೂ ಶಿಕ್ಷೆಯಾಗಬೇಕು. ಮುಂದಿನ ದಿನಗಳಲ್ಲಿ ಈ ಸರ್ಕಾರಕ್ಕೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ ಅನ್ನೋದು ನನ್ನ ಅಭಿಪ್ರಾಯ. ಈ ಕೇಸ್‌ನಲ್ಲಿ ಸರ್ಕಾರದ ನಡೆವಳಿಕೆ ಸರಿಯಿಲ್ಲ. ಪ್ರಾರಂಭಿಕ ಹಂತದಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ. ನಾನು ಧರ್ಮವನ್ನು ಬೆರೆಸಲು ಹೋಗಲ್ಲ. ಆದರೆ ಸರ್ಕಾರ ನಡೆದುಕೊಂಡ ರೀತಿ ಕ್ಷೇತ್ರಕ್ಕೆ ಅವಮಾನ, ಅನುಮಾನ ಆಗೋ ರೀತಿಯಲ್ಲಿ ಸರ್ಕಾರ ಎಸ್‌ಐಟಿ ತನಿಖೆ ನಾಟಕ ಆಡಿದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಕೆಶಿ

ಈ ಕೇಸ್‌ಲ್ಲಿ ಪ್ರಾರಂಭಿಕ ಹಂತದಲ್ಲಿ ಸರ್ಕಾರಕ್ಕೆ ದೂರು ಕೊಟ್ಟಿದ್ದು ದ್ವಾರಕನಾಥ್. ಸಿಎಂಗೆ ಅವರೇ ದೂರು ಕೊಟ್ಟರು. ಆಗ ಸಿಎಂ ದೂರು ಬಂದ ತಕ್ಷಣ ಕ್ರಮ ತೆಗೆದುಕೊಳ್ಳುವ ವಾತಾವರಣ ನಿರ್ಮಾಣ ಮಾಡಿದರು. ಇದರಲ್ಲಿ ಎಡಪಂಥೀಯ ಶಕ್ತಿಗಳು ಇದೆ ಎಂದು ಹೇಳ್ತಾರೆ. ಯಾರಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಅನುಶ್ರೀ ಕಲ್ಯಾಣದಲ್ಲಿ ರಾರಾಜಿಸಿದ ಅಪ್ಪು ಫೋಟೋ

Share This Article