ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

Public TV
1 Min Read

ರಾಯಚೂರು: ಹಾಸನದಿಂದ (Hassan) ಗುರು ರಾಘವೇಂದ್ರ ಸ್ವಾಮಿ ದರ್ಶನಕ್ಕಾಗಿ ಮಂತ್ರಾಲಯಕ್ಕೆ (Mantralayam) ಬಂದಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ (Tungabhadra River) ಈಜಲು ಹೋಗಿ ನಾಪತ್ತೆಯಾಗಿದ್ದಾರೆ. ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ನಾಪತ್ತೆಯಾಗಿರುವ ಯುವಕರು.

ಹಾಸನದಿಂದ ಬಂದಿದ್ದ 7 ಜನ ಯುವಕರ ತಂಡದಲ್ಲಿ ಮೂರು ಜನ ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಯುವಕರು ಈಜಲು ಹೋಗಿದ್ದ ವೇಳೆ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ನದಿ ಪಾತ್ರಕ್ಕೆ ತೆರಳದಂತೆ ಎಷ್ಟೇ ಎಚ್ಚರಿಕೆ ನೀಡಿದ್ದರೂ ಯುವಕರು ನಿರ್ಲಕ್ಷ್ಯ ತೋರಿ ಅಪಾಯಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಕಲಬುರಗಿ ಜ್ಯುವೆಲರಿ ಶಾಪ್‌ ದರೋಡೆ – ಅಂತರರಾಜ್ಯ ಕಳ್ಳರು ಭಾಗಿ ಶಂಕೆ, ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ

ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಹಾಗೂ ಈಜುಗಾರರ ತಂಡ ಯುವಕರಿಗಾಗಿ ಸಂಜೆವರೆಗೂ ಶೋಧಕಾರ್ಯ ನಡೆಸಿದೆ. ರಾತ್ರಿಯಾಗಿದ್ದರಿಂದ ಸದ್ಯ ಶೋಧ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಇದುವರೆಗೂ ಮೂರು ಜನ ಯುವಕರು ಪತ್ತೆಯಾಗಿಲ್ಲ. ಇದನ್ನೂ ಓದಿ: ತಮಿಳುನಾಡು ಲಾಕಪ್‌ ಡೆತ್‌ ಕೇಸ್‌ – ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

Share This Article