ಚುನಾವಣೆ ದಿನವೇ ಮಾವೋವಾದಿಗಳಿಂದ ಸ್ಫೋಟ – ಕರ್ತವ್ಯದಲ್ಲಿದ್ದ ಯೋಧನಿಗೆ ಗಾಯ

Public TV
1 Min Read

ರಾಯ್ಪುರ: ಚುನಾವಣಾ ದಿನದಂದೇ (ಮಂಗಳವಾರ) ಛತ್ತೀಸ್‌ಗಢದಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕಗಳನ್ನು ಸ್ಫೋಟಿಸಿದ್ದು, ಚುನಾವಣಾ ಕರ್ತವ್ಯದಲ್ಲಿದ್ದ ಕಮಾಂಡೋಗೆ ಗಾಯಗಳಾಗಿವೆ.

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 20 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಅವುಗಳಲ್ಲಿ ಹಲವು ಕ್ಷೇತ್ರಗಳು ಮಾವೋವಾದಿ ಪೀಡಿತ ಬಸ್ತಾರ್‌ನಲ್ಲಿವೆ. ಮೊದಲ ಹಂತದ ಚುನಾವಣೆಗಾಗಿ 25,000 ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.

ಸುಕ್ಮಾದ ತೊಂಡಮಾರ್ಕಾ ಪ್ರದೇಶದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಕೋಬ್ರಾ ಬೆಟಾಲಿಯನ್‌ನ ಒಬ್ಬ ಯೋಧ ಗಾಯಗೊಂಡಿದ್ದಾರೆ. ಯೋಧನನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

20 ಸ್ಥಾನಗಳಲ್ಲಿ 12 ಪರಿಶಿಷ್ಟ ಪಂಗಡ ಮತ್ತು ಒಂದು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ರೈತರು, ಮಹಿಳೆಯರು, ಆದಿವಾಸಿಗಳು ಮತ್ತು ದಲಿತರಿಗಾಗಿ ಹಾಲಿ ಸಿಎಂ ಭೂಪೇಶ್‌ ಬಘೇಲ್ ಸರ್ಕಾರದ ಕಲ್ಯಾಣ ಯೋಜನೆಗಳ ಸರಣಿ ಮತ್ತು ಅಧಿಕಾರವನ್ನು ಉಳಿಸಿಕೊಂಡರೆ ಕೃಷಿ ಸಾಲ ಮನ್ನಾ ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.

ಮೊದಲ ಹಂತದ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಭೂಪೇಶ್ ಬಘೇಲ್ ವಿರುದ್ಧ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಕುರಿತು ವಾಗ್ದಾಳಿ ನಡೆಸಿದರು. ಆದರೆ ಇತರ ಬಿಜೆಪಿ ನಾಯಕರು ಧಾರ್ಮಿಕ ಮತಾಂತರ, ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಭ್ರಷ್ಟಾಚಾರದ ವಿಚಾರ ಪ್ರಸ್ತಾಪಿಸಿ ಸಿಎಂ ವಿರುದ್ಧ ಹರಿಹಾಯ್ದಿದ್ದರು.

Share This Article