ಮಾರ್ಬಲ್ ತುಂಬಿದ್ದ ಲಾರಿ ಪಲ್ಟಿ- ನಾಲ್ವರು ಕಾರ್ಮಿಕರು ಗಂಭೀರ

By
1 Min Read

ಮಂಗಳೂರು: ಮಾರ್ಬಲ್ ತುಂಬಿದ್ದ ಲಾರಿಯೊಂದು (Marbal Loaded Lorry) ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಕಾರ್ಮಿಕರು ಉತ್ತರ ಭಾರತ ಮೂದವರು ಎಂಬುದಾಗಿ ತಿಳಿದುಬಂದಿದೆ.

ಘಟನೆ ವಿವರ: ಮಾರ್ಬಲ್ ಅನ್ ಲೋಡ್‍ಗಾಗಿ ಲಾರಿಯನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಯಿತು. ಅಲ್ಲದೆ ಹೋಗಿ ನೀರಿನ ತೊಟ್ಟಿಗೆ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ. ಇದನ್ನೂ ಓದಿ: ಉಡುಪಿ ಹಿಂದೂ ಸಮಾಜೋತ್ಸವಕ್ಕೆ ತಟ್ಟಿದ ಶಿವಮೊಗ್ಗ ಗಲಾಟೆ ಬಿಸಿ

ಘಟನೆ ನಡೆದ ಕೂಡಲೇ ಸ್ಥಳೀಯರು ಜಮಾಯಿಸಿ ನಾಲ್ಕು ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್