ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!

Public TV
1 Min Read

ಮುಂಬೈ: ನಗರದಾದ್ಯಂತ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಾತ್ಕಾಲಿಕವಾಗಿ ಮದುವೆ ನೋಂದಣಿ ಸೇವೆಯನ್ನು ಸ್ಥಗಿತಗೊಳಿಸಿದೆ.

ಮುಂಬೈನಲ್ಲಿ ಪ್ರಸ್ತುತ ಕೋವಿಡ್-19 ಪರಿಸ್ಥಿತಿಯಿಂದಾಗಿ ಮದುವೆ ನೋಂದಣಿ ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪ್ರಕರಣಗಳು ಕಡಿಮೆಯಾದ ಮೇಲೆ ಶೀಘ್ರದಲ್ಲೇ ಸೇವೆಯನ್ನು ಮರುಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ ಪಾಲಿಕೆ ವೀಡಿಯೋ ಮೂಲಕ ಕೆವೈಸಿ(ನಿಮ್ಮ ಗ್ರಾಹಕರನ್ನು ಅರಿತುಕೊಳ್ಳಿ) ಆಯ್ಕೆ ನೀಡುವ ಬಗ್ಗೆ ಪರಿಶೀಲಿಸುತ್ತಿದೆ. ಇದನ್ನೂ ಓದಿ: ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ

BMC Suspends Marriage Registration in Mumbai Due to COVID

ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಸಲಾದ 57,534 ಪರೀಕ್ಷೆಗಳಲ್ಲಿ 7,895 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬಿಎಂಸಿ ಬುಲೆಟಿನ್ ಪ್ರಕಾರ, ಮುಂಬೈನಲ್ಲಿ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 9,99,862 ಕ್ಕೆ ಏರಿದೆ.

ಕಳೆದ 24 ಗಂಟೆಗಳಲ್ಲಿ 11 ಜನರು ಈ ವೈರಸ್‍ನಿಂದ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 16,257 ಕ್ಕೆ ಏರಿದ್ದು, ನಗರದಲ್ಲಿ 60,371 ಸಕ್ರಿಯ ಪ್ರಕರಣಗಳಿವೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 41,327 ಹೊಸ ಪ್ರಕರಣಗಳು ಮತ್ತು 29 ಸಾವುಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಬುಲೆಟಿನ್ ಭಾನುವಾರ ತಿಳಿಸಿದೆ. ಭಾನುವಾರ 8 ಓಮಿಕ್ರಾನ್ ಸೋಂಕುಗಳು ವರದಿಯಾಗಿದ್ದು, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 1,738 ಕ್ಕೆ ತಲುಪಿದೆ.

Share This Article
Leave a Comment

Leave a Reply

Your email address will not be published. Required fields are marked *