ಇನ್ಮುಂದೆ KSRTC, BMTC ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯ: ರಾಮಲಿಂಗಾ ರೆಡ್ಡಿ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ (Covid) ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ (Bus) ಮಾಸ್ಕ್ (Mask) ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.

ಕೇರಳದಲ್ಲಿ (Kerala) ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ. ಇದನ್ನೂ ಓದಿ: ನನಗೂ, ದೆಹಲಿಗೂ ಟಚ್ ಇಲ್ಲ: ಎಸ್.ಆರ್ ವಿಶ್ವನಾಥ್ ಹೀಗಂದಿದ್ಯಾಕೆ?

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ. ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ. ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿಯಲ್ಲಿ (BMTC) ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: 5 ದಿನಗಳ ಹಿಂದೆ ಬೆಂಗ್ಳೂರಿನಲ್ಲಿ ಕೊರೊನಾದಿಂದ ವ್ಯಕ್ತಿ ಸಾವು: ದಿನೇಶ್ ಗುಂಡೂರಾವ್

Share This Article