‘ರಾನಿ’ ಚಿತ್ರದಲ್ಲಿ ಕಿರಣ್ ರಾಜ್ ಗೆ ಮಾಸ್ ಲುಕ್

Public TV
1 Min Read

ಸ್ಟಾರ್ ಕ್ರಿಯೇಷನ್ಸ್ ಮೂಲಕ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ಅವರು ನಿರ್ಮಿಸಿರುವ,  ಗುರುತೇಜ್ ಶೆಟ್ಟಿ (Gurtej Shetty) ಕಥೆ  ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕಿರಣ್ ರಾಜ್ (Kiran Raj) ನಾಯಕರಾಗಿ ನಟಿಸುತ್ತಿರುವ ‘ರಾನಿ’ (Rani) ಚಿತ್ರದ ಪೋಸ್ಟರ್ (Poster) ಯಗಾದಿ ಹಬ್ಬಕ್ಕೆ ಬಿಡುಗಡೆಯಾಗಿದೆ. ನಾಯಕ ಕಿರಣ್ ರಾಜ್ ಮಾಸ್ ಲುಕ್ ನಲ್ಲಿ (Mass Look) ಕಾಣಿಸಿಕೊಂಡಿದ್ದಾರೆ.

ಕಿರಣ್ ರಾಜ್ 13,000 ಅಡಿ ಎತ್ತರದಿಂದ ಜಿಗಿದು ಟೈಟಲ್ ಬಿಡುಗಡೆ ಮಾಡಿ ಚಿತ್ರರಂಗ ಹಾಗೂ ಪ್ರೇಕ್ಷಕರಿಂದ  ಪ್ರಶಂಸೆ ಪಡೆದುಕೊಂಡಿದ್ದರು.  ಈಗ ಬಿಡುಗಡೆಯಾಗಿರುವ ಮಾಸ್ ಲುಕ್ ಪೋಸ್ಟರ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕಿರಣ್ ರಾಜ್ ಚಿತ್ರದಲ್ಲಿ ಭರ್ಜರಿ ಫೈಟ್ಸ್  ಮಾಡಿದಾರಂತೆ, ಚಿತ್ರದಲ್ಲಿ 6 ಸಾಹಸ ಸನ್ನಿವೇಶಗಳಿದೆ‌. ‘ರಾನಿ’ ಚಿತ್ರಕ್ಕಾಗಿ 7 ಸೆಟ್ ಗಳನ್ನು ಹಾಕಲಾಗಿದೆ‌.  5 ಸೆಟ್ ಗಳಲ್ಲಿ ಚಿತ್ರಿಕರಣ ಈಗಾಗಲೇ ಮುಗಿದಿದೆ. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಈಗಾಗಲೇ ಶೇಕಡಾ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.   ರವಿಶಂಕರ್, ಮೈಕೋ ನಾಗರಾಜ್, ನಾಗತಿ ಹಳ್ಳಿ ಚಂದ್ರಶೇಖರ್, ಬಿ ಸುರೇಶ, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪೃಥ್ವಿರಾಜ್‌, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೆಂದ್ರ ಆರಸ್, ಮನಮೋಹನ್ ರೈ ಮುಂತಾದವರ ತಾರಾಬಳಗ ಚಿತ್ರಕ್ಕಿದೆ‌.

 ‘ಸಿಂಗಾರ ಸಿರಿಯೆ’ ಹಾಡು ಬರೆದಿರುವ ಪ್ರಮೋದ್ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.  ಸೂಕ್ಷ್ಮ ಕಥೆಯುಳ್ಳ,   ಪಕ್ಕ ಆಕ್ಷನ್ ಚಿತ್ರ ಇದಾಗಿದ್ದು, ಎಲ್ಲಾ ರಾಜ್ಯದಲ್ಲೂ ಕನ್ನಡದಲ್ಲೇ ಬಿಡುಗಡೆ ಯಾಗಲಿದೆ.  ಡಿಸೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ. ಮುಂದಿನ ದಿನಗಳಲ್ಲಿ ನಾಯಕಿಯರು ಯಾರು ಎಂಬುದನ್ನು  ತಿಳಿಸುತ್ತೇವೆ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ.

Share This Article
Leave a Comment

Leave a Reply

Your email address will not be published. Required fields are marked *