ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಾಮೂಹಿಕ ಮದುವೆ, ಪ್ರತಿ ಜೋಡಿಗೆ 50 ಸಾವಿರ – ಸರ್ಕಾರದ ಮಂಜೂರಾತಿ

Public TV
1 Min Read

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಪ್ರತಿ ಜೋಡಿಗೆ 50 ಸಾವಿರ ರೂ. ಕೊಡುವ ಕಾರ್ಯಕ್ರಮಕ್ಕೆ ಸರ್ಕಾರದ ಮಂಜೂರಾತಿ ದೊರೆತಿದೆ.ಇದನ್ನೂ ಓದಿ: ಬೆಂಗಳೂರಿಗೆ ಮತ್ತೊಂದು ಟನಲ್‌ ರೋಡ್‌ ಘೋಷಿಸಿದ ಡಿಕೆಶಿ

ರಾಜ್ಯ ಬಜೆಟ್‌ನಲ್ಲಿ ಈ ಕುರಿತು ಘೋಷಿಸಲಾಗಿತ್ತು. ಇದೀಗ ಸರ್ಕಾರಿ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಮತ್ತು ಕಾರ್ಯಕ್ರಮ ಆಯೋಜಿಸುವ ಸಂಸ್ಥೆಗೆ, ಪ್ರತಿ ಜೋಡಿಗೆ 5 ಸಾವಿರ ರೂ. ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ 5 ಸಾವಿರ ಜೋಡಿ ಮಿತಿವರೆಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಬಹುದಾಗಿದೆ ಎಂದು ತಿಳಿಸಿದೆ.

ಇದೇ ಸಂದರ್ಭದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯುವರೆಗೆ ತರಗತಿ ಪ್ರಾರಂಭಿಸಲು ಘೋಷಿಸಲಾಗಿತ್ತು. ಪ್ರಸಕ್ತ ವರ್ಷ 100 ಆಜಾದ್ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲು ಆದೇಶ ಹೊರಡಿಸಲಾಗಿದೆ.ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಕುನ್ಹಾ ಆಯೋಗದ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ – ರಾಜ್ಯಕ್ಕೆ ಹೈಕೋರ್ಟ್ ಸೂಚನೆ

Share This Article