ವಿಜಯಪುರ | ಸರ್ವಿಸ್‌ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ

1 Min Read

ವಿಜಯಪುರ: ನಗರದ (Vijayapur) ಹೊರವಲಯದಲ್ಲಿರುವ ಸರ್ವಿಸ್‌ ಸೆಂಟರ್‌ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) 20ಕ್ಕೂ ಹೆಚ್ಚು ಕಾರುಗಳು (Car) ಸುಟ್ಟು ಕರಕಲಾಗಿವೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್‌ ಸೆಂಟರ್‌ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವೀಸ್ ಸೆಂಟರ್ ಸುಟ್ಟು ಭಸ್ಮವಾಗಿದೆ. ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಕಾರುಗಳು ಸುಟ್ಟು ಭಸ್ಮವಾಗಿವೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕೋಲ್ಕತ್ತಾ ಬಳಿಯ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 21 ಮಂದಿ ಸಜೀವ ದಹನ, 28 ಜನ ಮಿಸ್ಸಿಂಗ್‌

Share This Article