ತಿರುವನಂತಪುರಂ: ಕೆರಳದ (Kerala) ತ್ರಿಶೂರ್ ರೈಲು ನಿಲ್ದಾಣದಲ್ಲಿ (Thrissur Railway Station) ಭಾನುವಾರ (ಜ.4) ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ (Fire Accident) ನಿಲ್ದಾಣದ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ.
ಪ್ಲಾಟ್‌ಫಾರ್ಮ್ ಸಂಖ್ಯೆ 2ರ ಬಳಿ ಇರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಅಗ್ನಿ ಅವಘಡದಿಂದ ಪ್ರಯಾಣಿಕರು ಮತ್ತು ಹತ್ತಿರದ ನಿವಾಸಿಗಳಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು. ಬೆಳಿಗ್ಗೆ 6:45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಪ್ರತಿದಿನ 500 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡುವ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ – ಪ್ರಾಣಿ ಪಕ್ಷಿಗಳಿಗೆ ಕಂಟಕ
Thrissur, Kerala: A massive fire broke out at Thrissur Railway Station. The blaze originated in the bike parking area near the station’s rear entrance, destroying several motorcycles. Preliminary reports indicate that more than 600 bikes were parked in the affected area pic.twitter.com/XQoSURUtUB
— IANS (@ians_india) January 4, 2026
ಪಾರ್ಕಿಂಗ್ ಮಾಡಿದ್ದ ವಾಹನಗಳಲ್ಲಿ ಇಂಧನ ಇದ್ದಿದ್ದರಿಂದ ಬೆಂಕಿ ವೇಗವಾಗಿ ಹಬ್ಬಿದೆ ಇದು ಅವಘಡದ ತೀವ್ರತೆಗೆ ಕಾರಣವಾಗಿದೆ. ಹಲವಾರು ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಕೆಲವು ವಾಹನಗಳಿಗೆ ಬಾಗಶಃ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಹಾನಿಗೊಳಗಾದ ವಾಹನಗಳ ಮಾಹಿತಿಯನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್, ಇಂಧನ ಸೋರಿಕೆ ಅಥವಾ ಬೇರೆ ಕಾರಣದಿಂದ ಈ ಅವಘಡ ಸಂಭವಿಸಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ರೈಲ್ವೆ ನಿಲ್ದಾಣದ ಆವರಣದ ಸಿಸಿಟಿವಿ ದೃಶ್ಯಾವಳಿಗಳು ತನಿಖೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ.
ಪಾರ್ಕಿಂಗ್ ಪ್ರದೇಶವು ಗುರುವಾಯೂರಿಗೆ ಹೋಗುವ ರೈಲುಗಳು ಬಳಸುವ ಹಳಿಯ ಹತ್ತಿರದಲ್ಲಿದೆ. ಆದರೆ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರಿಂದ ಬೆಂಕಿಯಿಂದ ರೈಲ್ವೆ ನಿಲ್ದಾಣದ ಮೂಲಸೌಕರ್ಯಗಳಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಈ ಘಟನೆಯಿಂದ ರೈಲು ಸಂಚಾರ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದನ್ನೂ ಓದಿ: Vijayapura | ಅಗ್ನಿ ಅವಘಡ – ಹೊತ್ತಿ ಉರಿದ ಹೋಟೆಲ್

