Greater Noida| ಕೂಲರ್ ನಿರ್ಮಾಣದ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ – 3 ಕಾರ್ಖಾನೆಗಳು ಭಸ್ಮ

Public TV
1 Min Read

ಲಕ್ನೋ: ಕೂಲರ್ ನಿರ್ಮಾಣದ ಫ್ಯಾಕ್ಟರಿಯಲ್ಲಿ (Cooler Manufacturing Factory) ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂಡ ಘಟನೆ ಗ್ರೇಟರ್ ನೋಯ್ಡಾದ (Greater Noida) ಇಕೋಟೆಕ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದೆ.

ಘಟನೆಯಲ್ಲಿ ಮೂರು ಕಾರ್ಖಾನೆಗಳು ಸಟ್ಟು ಭಸ್ಮವಾಗಿದೆ. 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ವಿಜಯೇಂದ್ರನ ಚಮಚಾಗಳಿದ್ರೆ ಪ್ರಶ್ನೆ ಕೇಳ್ಬೇಡಿ – ಮಾಧ್ಯಮಗಳ ಮುಂದೆ ಸಿಡಿಮಿಡಿಗೊಂಡ ಯತ್ನಾಳ್

ಸೋಮವಾರ ಮಧ್ಯಾಹ್ನ 1:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಉಳಿದ ಕಾರ್ಖಾನೆಗಳಿಗೆ ಬೆಂಕಿ ಹಬ್ಬಿದೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಅಲ್ಲದೇ ಕಾರ್ಖಾನೆಯ ಒಳಗೆ ಯಾರೂ ಸಿಲುಕಿಕೊಂಡಿಲ್ಲ ಎಂದು ಇಕೋಟೆಕ್ ಪೊಲೀಸ್ ಠಾಣೆಯ ಉಸ್ತುವಾರಿ ಅನಿಲ್ ಕುಮಾರ್ ಪಾಂಡೆ ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಢ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಐಪಿಎಲ್‌ನಿಂದ ಬ್ಯಾನ್‌ ಮಾಡಿ – ರಿಯಾನ್‌ ಪರಾಗ್‌ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್‌

ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಘಟನಾ ಸ್ಥಳದಿಂದ ದಟ್ಟವಾದ ಕಪ್ಪು-ಬೂದು ಹೊಗೆ ಹೊರಬರುತ್ತಿರುವುದನ್ನು ಕಾಣಬಹುದು. ಇದನ್ನೂ ಓದಿ: ಈ ವರ್ಷ ಉದ್ಘಾಟನೆಯಾಗಲ್ಲ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ: ನಿತಿನ್ ಗಡ್ಕರಿ ಮಾಹಿತಿ

Share This Article