ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ

Public TV
2 Min Read

ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ (KR Market) ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Massive Fire) ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ದುರಂತದಲ್ಲಿ ಸಜೀವ ದಹನವಾದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಯಿಂದ ಭೂಕುಸಿತ – ಇಬ್ಬರು ಸಾವು, ಇಂದು ರೆಡ್ ಅಲರ್ಟ್ ಘೋಷಣೆ

ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ (Bengaluru Police Commissioner) ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ನಮ್ಮ ಪೊಲೀಸ್ರು ಪರಿಶೀಲನೆ ಮಾಡ್ತಿದ್ದಾರೆ. ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದ್ರೆ ಒಂದು ಫ್ಯಾಮಿಲಿ ಮಾತ್ರ ಬೆಂಕಿ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ.

ಎರಡು ಮೃತದೇಹಗಳನ್ನ ಈಗಾಗಲೇ ಹೊರ ತೆಗೆಯಲಾಗಿದೆ. ಮೇಲಿನ ಫ್ಲೋರ್ ನಲ್ಲಿ ಕಂಪ್ಲೀಟ್ ಬೆಂಕಿ, ಹೊಗೆ ಆವರಿಸಿದೆ ಒಳಗಡೆ ಹೋಗೋದಕ್ಕೆ ಆಗ್ತಿಲ್ಲ, ಹೀಗಾಗಿ ಒಳಗಡೆ ಸಿಲುಕಿದವರನ್ನ ಹುಡುಕಲು ಆಗ್ತಿಲ್ಲ. ಕಾರ್ಯಾಚರಣೆ ಮುಂದುವರಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ನಮ್ಮ ರಕ್ಷಣಾ ತಂಡದವರು ಕಾರ್ಯಾಚರಣೆ ಮಾಡ್ತಿದ್ದಾರೆ. ಇನ್ನು ಮೃತದೇಹಗಳು ಇರುವ ಶಂಕೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ನಗರ್ತಪೇಟೆಯಲ್ಲಿ ಭೀಕರ ಅಗ್ನಿ ದುರಂತ – ಓರ್ವ ಸುಟ್ಟು ಕರಕಲು, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಏನಿದು ದುರಂತ?
ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದ ಮಹಡಿ ಮನೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಸರ್ಕಾರ ಧರ್ಮಸ್ಥಳದ ಜೊತೆಗಿರುತ್ತೆ, ದಿಕ್ಕು ತಪ್ಪಿಸಿದವರನ್ನ ನಾವು ಬಿಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Share This Article